ನಿನ್ನೆ ರಾತ್ರಿಯಿಂದ ಮೂಡಿಗೆರೆಯಲ್ಲಿ ಧಾರಾಕಾರ ಮಳೆ; ಅಲೇಖಾನ್ ಬಳಿ ಗುಡ್ಡ ಕುಸಿತ
ಚಿಕ್ಕಮಗಳೂರು, ಆಗಸ್ಟ್ 3: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ನಿನ್ನೆ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆಯ ಸುತ್ತಮುತ್ತಲೂ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಕಳಸ, ಕುದುರೆಮುಖ, ಕೆರೆಕಟ್ಟೆ ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ. ಪಶ್ಚಿಮ ಘಟ್ಟಗಳ ಸಾಲಲ್ಲೂ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.
ಹೀಗೆ ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಹೇಮಾವತಿ ಇದೀಗ ಮೈದುಂಬಿ ಹರಿಯುತ್ತಿದ್ದಾಳೆ.

ಗುಡ್ಡ ಕುಸಿತ: ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯ ಅಲೇಖಾನ್ ಬಳಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಅಲೇಖಾನ್ ಗೆ ಸಂಪರ್ಕ ಕಲ್ಪಿಸೋ ದಾರಿ ಸಂಪೂರ್ಣ ಬಂದ್ ಆಗಿದೆ.












Click it and Unblock the Notifications