ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾರ್ಮಾಡಿ ಘಾಟ್ ನಲ್ಲಿ ಗಾಳಿ ಸಹಿತ ಭಾರೀ ಮಳೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್ 01: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಭರ್ಜರಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ.

Recommended Video

ಎಲ್ಲಾ ಕ್ರಿಕೆಟ್ ಪಂದ್ಯಗಳು ಮೊದಲೇ ಫಿಕ್ಸ್ ಆಗಿರುತ್ತವೆಯೇ ? | Oneindia Kannada

ಮೂಡಿಗೆರೆ, ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಎನ್ ಆರ್ ಪುರ, ಮುಳ್ಳಯ್ಯನಗಿರಿ ಭಾಗಗಳಲ್ಲಿ ಮಳೆಯಾಗುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಒಂದೆಡೆ ಆತಂಕವೂ ಶುರುವಾಗಿದೆ. ನಗರದಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಎರಡು ದಿನ ಭಾರಿ ಗಾಳಿ, ಮಳೆ; ಕೊಡಗು ಜಿಲ್ಲೆಗೆ Orange ಅಲರ್ಟ್ಎರಡು ದಿನ ಭಾರಿ ಗಾಳಿ, ಮಳೆ; ಕೊಡಗು ಜಿಲ್ಲೆಗೆ Orange ಅಲರ್ಟ್

Heavy Rain With Wind In Charmadi Ghat Of Chikkamagaluru

ಕಡೂರು, ತರೀಕೆರೆ ತಾಲೂಕಿನ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆಯ ಚಾರ್ಮಾಡಿಯಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಮಲೆಮನೆ, ದುರ್ಗದಹಳ್ಳಿ, ಬಾಳೂರು ಸುತ್ತಮುತ್ತ ಈ ರೀತಿ ನಿರಂತರ ಮಳೆಯಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ತುಂಬಿದೆ. ಕಳೆದ ಬಾರಿ ಅತಿವೃಷ್ಟಿಯಿಂದ ಈ ಪ್ರದೇಶಗಳಲ್ಲಿ ಪ್ರವಾಹ ಸಂಭವಿಸಿತ್ತು. ಹೀಗಾಗಿ ಹೀಗೆ ಮಳೆ ಸುರಿಯುತ್ತಿರುವುದು ಭಯವನ್ನೂ ಉಂಟುಮಾಡಿದೆ.

English summary
Heavy rain with wind reported in charmadi ghat of chikkamagaluru district today. People of kottigehara, durgadahalli, baluru worried about flood,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X