ಮಲೆನಾಡು ಪ್ರದೇಶದಲ್ಲಿ ಮುಂದುವರೆದ ಮಳೆಯ ಅಬ್ಬರ

ಚಿಕ್ಕಮಗಳೂರು, ಜುಲೈ 16: ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕದ ಕಾಫಿನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.

Recommended Video

      ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು | Filmibeat Kannada

      ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ.

      ಇಂದು ಮಧ್ಯಾಹ್ನದಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.

      Heavy Rainfall In Across Chikkamagaluru District

      ಕಳೆದ ರಾತ್ರಿಯೂ ಮಳೆ ಸುರಿದಿದ್ದರಿಂದ ಜಿಲ್ಲೆಯ ಜೀವ ನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳಗೊಂಡಿದೆ. ವರುಣನ ಅಬ್ಬರ ಹೀಗೇ ಮುಂದುವರೆದರೆ ಅಪಾಯ ಎದುರಾಗಲಿದ್ದು, ಜನರು ಆತಂಕದಲ್ಲಿದ್ದಾರೆ.

      ಇದರ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತೃ ವಿಯೋಗದ ಮಧ್ಯೆಯೂ ಕೊರೊನಾ ವೈರಸ್ ಸೋಂಕಿತೆ ಮಗುವಿಗೆ ಜನ್ಮ ನೀಡಿದ್ದಾಳೆ. ನಿನ್ನೆ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ಪತ್ತೆಯಾಗಿತ್ತು.

      Heavy Rainfall In Across Chikkamagaluru District

      ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಮಹಿಳೆಯು ಚಿಕ್ಕಮಗಳೂರಿನ ಕೋವಿಡ್ ಅಸ್ಪತ್ರೆಗೆ ದಾಖಲಾಗಿದ್ದಳು. ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದಳು.

      ಮಗು ಆರೋಗ್ಯವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಗರ್ಭಿಣಿಯ ತಾಯಿಯಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿತ್ತು, ಆದರೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+