ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಮುಳುಗುತ್ತಿದೆ ಹೆಬ್ಬಾಳೆ ಸೇತುವೆ

ಚಿಕ್ಕಮಗಳೂರು, ಜುಲೈ 17: ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ.

Recommended Video

      Yeddyurappa Government Fail Again!! | Oneindia Kannada

      ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ಹರಿವಿನ ಮಟ್ಟವೂ ಏಕಾಏಕಿ ಹೆಚ್ಚಳವಾಗಿದೆ.

      ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ. ಭದ್ರಾ ನದಿಯ ಒಳಹರಿವು ಏರಿಕೆಯಾಗಿದ್ದರಿಂದ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಗೋಚರಿಸುತ್ತಿದೆ.

      Hebbale Bridge In Chikkamagaluru Submerging In River

      ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೇವಲ ಎರಡು ಅಡಿ ಬಾಕಿ ಉಳಿದಿದೆ. ಕಳೆದ ವರ್ಷ 30ಕ್ಕೂ ಹೆಚ್ಚು ಬಾರಿ ಈ ಸೇತುವೆ ಮುಳುಗಡೆಯಾಗಿತ್ತು. ಈ ವರ್ಷದಲ್ಲಿ ಮೊದಲ ಬಾರಿಗೆ ಮುಳುಗಡೆ ಸಾಧ್ಯತೆ ಕಂಡುಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+