ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೆಕ್‌ಬೌನ್ಸ್ ಪ್ರಕರಣ: ಸಿದ್ಧಾರ್ಥ್ ಪತ್ನಿ ಮಾಳವಿಕಾ ಹೆಗ್ಡೆಗೆ ಜಾಮೀನು

|
Google Oneindia Kannada News

ಚಿಕ್ಕಮಗಳೂರು, ನವೆಂಬರ್ 07: ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾರ್ಥ್ ಪತ್ನಿ ಮಾಳವಿಕಾ ಹೆಗ್ಡೆಗೆ ಜಾಮೀನು ಸಿಕ್ಕಿದೆ.

ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು ನೀಡಿದೆ.ಕಾಫಿ ಡೇ ಮೂಡಿಗೆರೆ ಹಾಗೂ ಸುತ್ತಮುತ್ತಲ ಹಲವಾರು ಬೆಳೆಗಾರರಿಂದ ಕಾಫಿ ಖರೀದಿ ಮಾಡಿತ್ತು.

ಅವರ ಪೈಕಿ ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಗ್ರಾಮದ ಶಿವಪ್ರಕಾಶ್ ಎಸ್ಟೇಟ್ ಮಾಲೀಕ ಕೆ.ನಂದೀಶ್ ಅವರು ಬಾಕಿ ಹಣಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

Siddhartha

ಸಂಸ್ಥೆಯ ಇತರೆ ನಿರ್ದೇಶಕರಾದ ಜೈರಾಜ್ ಸಿ.ಹುಬ್ಳಿ, ಕಾರ್ಯದರ್ಶಿ ಸದಾನಂದಪೂಜಾರಿ, ಕಂಪೆನಿ ಮುಖ್ಯಸ್ಥರಾದ ನಿತಿನ್ ಬಾಗಮನಿ, ಕಿಟಿಪಿ ಸಾವಂತ್, ಜಾವೆದ್ ಫರ್ವೆಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಈ ಸಂಬಂಧ ಮಾಳವಿಕಾ ಹಾಗೂ ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಜಾಮೀನು ನೀಡಿದೆ.

Recommended Video

BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada

ಕಾಫಿ ಮಾರಾಟ ಮಾಡಿದ್ದ ಬಾಪ್ತು 45 ಲಕ್ಷದ ಪೈಕಿ 4 ಲಕ್ಷ ರೂ.ಗಳನ್ನು ಮಾತ್ರ ಪಾವತಿ ಮಾಡಿದೆ. ಬಾಕಿ ಹಣಕ್ಕಾಗಿ ಕಂಪೆನಿ ಚೆಕ್ ಕೊಟ್ಟಿದ್ದು, ಅವು ಬೌನ್ಸ್ ಆಗಿವೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

English summary
In A Big Relief to Malavika Hegde , wife of Cafe Coffee Day Founder Late VG Siddhartha, the Mudigere JMFC court on Saturaday granted bailto her in a cheque bounce case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X