ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಂದ್ರಪ್ರಭಾ ಕಾರಿನಿಂದ ಹಿಟ್ ಆ್ಯಂಡ್ ರನ್: ಯುವಕನ ಸ್ಥಿತಿ ಗಂಭೀರ
ಚಿಕ್ಕಮಗಳೂರು, ಸೆಪ್ಟೆಂಬರ್ 06: ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೈಕ್‌ಗೆ ಗುದ್ದಿ ಕಾರು ಚಾಲಕ ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ನಡೆದಿದೆ.
ಕೆಎ 51 ಎಂಡಿ 9552 ರಿಜಿಸ್ಟರ್‌ನ ಕಾರು ಮಾಲ್ತೇಶ್ ಎನ್ನುವವರ ಬೈಕ್‌ಗೆ ಗುದ್ದಿದ್ದು, ಕಾರು ಗುದ್ದಿರುವ ರಬಸಕ್ಕೆ ಮಾಲತೇಶ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ಕಾರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಸ್ಪರ್ಧಿ ಚಂದ್ರಪ್ರಭಾ ಅವರಿಗೆ ಸೇರಿದ ಕಾರು ಎನ್ನಲಾಗಿದೆ.

ಕಾರು ಬೈಕ್‌ಗೆ ಡಿಕ್ಕೆಯಾಗಿ ಮಾಲತೇಶ್ ಗಂಭೀರ ಗಾಯಗೊಂಡರೂ ಸಹ ಕಾರು ಚಾಲಕ ಅಪಘಾತವಾದ ಸ್ಥಳದಲ್ಲಿ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿರುವ ಮಾಲ್ತೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಟ್ ಆ್ಯಂಡ್ ರನ್ ಪ್ರಕರಣ ಸಂಬಂಧ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿ ಕೊಂದು ನೇರವಾಗಿ ಠಾಣೆಗೆ ಬಂದ ಪತಿ
ಚಿಕ್ಕಮಗಳೂರು: ಒಂದು ವಾರಗಳ ಕಾಲ ಪತ್ನಿ ಜೊತೆ ಗೋವಾ ರೌಂಡ್ಸ್ ಮಾಡಿಕೊಂಡು ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಮೃತಳನ್ನ 34 ವರ್ಷದ ಶಮಾಭಾನು ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆಗೈದ ಪತಿ ಶಬ್ಬರ್ ಅಹಮದ್ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜೊತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ. ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ ಎನ್ನಲಾಗಿದೆ.

ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೊನಾ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನ ಮದುವೆಯಾಗಿದ್ದನು. ಇದೀಗ, ಆಕೆಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್‌ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications