ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಿಂದ ಭಕ್ತರಿಗೆ ಮಹತ್ವದ ಪ್ರಕಟಣೆ
ಚಿಕ್ಕಮಗಳೂರು, ಜೂನ್, 5: ಜೂನ್ 8 ರಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಭಕ್ತರ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜೂನ್ 8 ರ ನಂತರವೂ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿದೆ.
ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದರ್ಶನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿ ದಿಟ್ಟ ಕ್ರಮ ಕೈಗೊಂಡಿದೆ.
ದೇಶ ಹಾಗೂ ರಾಜ್ಯಾದ್ಯಂತ ಕೊರೊನಾ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಒಂದು ವೇಳೆ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಮಸ್ಯೆ ಎದುರಾಗುತ್ತದೆ.

ಕೆಲವೊಂದು ಧಾರ್ಮಿಕ ಕೈಂಕರ್ಯಗಳಿಗೆ ಸಮಸ್ಯೆ ಆಗುವ ಹಿನ್ನೆಲೆಯಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕೇವಲ ಆನ್ ಲೈನ್ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಭಕ್ತರಿಗೆ ಪಾರ್ಸೆಲ್ ಮೂಲಕ ಪ್ರಸಾದವನ್ನು ಕಳುಹಿಸಿಕೊಡಲಾಗುವುದು ಎಂದು ತಿಳಿಸಿದೆ.

ಆ ಮೂಲಕ ಸರ್ಕಾರ ಜೂನ್ 8 ರಿಂದ ದೇವಾಲಯಗಳ ಪ್ರವೇಶಕ್ಕೆ ಅನುಮತಿ ಕೊಟ್ಟರೂ ಹೊರನಾಡು ಆಡಳಿತ ಮಂಡಳಿ ಭಕ್ತರಿಗೆ ಯಾವುದೇ ಪ್ರವೇಶ ನೀಡದಿರಲು ತೀರ್ಮಾನ ಕೈಗೊಂಡಿದೆ.












Click it and Unblock the Notifications