ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಿಂದ ಭಕ್ತರಿಗೆ ಮಹತ್ವದ ಪ್ರಕಟಣೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್, 5: ಜೂನ್ 8 ರಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಭಕ್ತರ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜೂನ್ 8 ರ ನಂತರವೂ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿದೆ.

ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದರ್ಶನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿ ದಿಟ್ಟ ಕ್ರಮ ಕೈಗೊಂಡಿದೆ.

 ರಂಭಾಪುರಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಟ ಜಗ್ಗೇಶ್, ಕೋಮಲ್ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಟ ಜಗ್ಗೇಶ್, ಕೋಮಲ್

ದೇಶ ಹಾಗೂ ರಾಜ್ಯಾದ್ಯಂತ ಕೊರೊನಾ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಒಂದು ವೇಳೆ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಮಸ್ಯೆ ಎದುರಾಗುತ್ತದೆ.

Even After June 8 Horanadu Annapoorneshwari Temple Bandh

ಕೆಲವೊಂದು ಧಾರ್ಮಿಕ ಕೈಂಕರ್ಯಗಳಿಗೆ ಸಮಸ್ಯೆ ಆಗುವ ಹಿನ್ನೆಲೆಯಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಲಾಕ್ ಡೌನ್ ಹಿನ್ನೆಲೆ: ಹೊರನಾಡು ದೇವಾಲಯದಿಂದ ಸಹಾಯಲಾಕ್ ಡೌನ್ ಹಿನ್ನೆಲೆ: ಹೊರನಾಡು ದೇವಾಲಯದಿಂದ ಸಹಾಯ

ಕೇವಲ ಆನ್ ಲೈನ್ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಭಕ್ತರಿಗೆ ಪಾರ್ಸೆಲ್ ಮೂಲಕ ಪ್ರಸಾದವನ್ನು ಕಳುಹಿಸಿಕೊಡಲಾಗುವುದು ಎಂದು ತಿಳಿಸಿದೆ.

Even After June 8 Horanadu Annapoorneshwari Temple Bandh

ಆ ಮೂಲಕ ಸರ್ಕಾರ ಜೂನ್ 8 ರಿಂದ ದೇವಾಲಯಗಳ ಪ್ರವೇಶಕ್ಕೆ ಅನುಮತಿ ಕೊಟ್ಟರೂ ಹೊರನಾಡು ಆಡಳಿತ ಮಂಡಳಿ ಭಕ್ತರಿಗೆ ಯಾವುದೇ ಪ್ರವೇಶ ನೀಡದಿರಲು ತೀರ್ಮಾನ ಕೈಗೊಂಡಿದೆ.

English summary
The government has allowed the entry of devotees in all the temples across the state from June 8, but the Annapoorneshwari temple will be closed even after June 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X