ಚಿಕ್ಕಮಗಳೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸಲು ಸಿದ್ಧತೆ ಹೇಗಿದೆ?, ಅಪರ ಜಿಲ್ಲಾಧಿಕಾರಿಯ ಸೂಚನೆಗಳೇನು?
ಚಿಕ್ಕಮಗಳೂರು, ಮೇ, 19: ಇದೇ ಮೇ 22ರಿಂದ ಜೂನ್ 02ರವರೆಗೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಏಕ ಕಾಲದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದ್ದರಿಂದ ಪರೀಕ್ಷಾ ಪ್ರಕ್ರಿಯೆಯನ್ನು ಸುವ್ಯವಸ್ಥಿತವಾಗಿ ಹಾಗೂ ಶಾಂತಿ, ಶಿಸ್ತು ಪಾಲನೆಯೊಂದಿಗೆ ನಡೆಸಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ತ್ರಿ ಸದಸ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒಟ್ಟು ಏಳು ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಕರ್ತವ್ಯಕ್ಕೆ ನೇಮಕ ಆಗಿರುವ ಅಧಿಕಾರಿಗಳು ಸಿಬ್ಬಂದಿ ತಮ್ಮ ತಮ್ಮ ಕರ್ತವ್ಯಗಳನ್ನು ಅತ್ಯಂತ ಜಾಗರುಕತೆ ಮತ್ತು ಶಿಸ್ತಿನಿಂದ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಮೂಲಭೂತ ವ್ಯವಸ್ಥೆಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಸಿಸಿ ಕ್ಯಾಮೆರಾ ಮತ್ತು ಸರ್ಕಾರ ಹೊರಡಿಸಿರುವ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಅನುಷ್ಠಾನಗೊಳ್ಳಬೇಕು. ಅಲ್ಲದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣವಿರುವಂತೆ ನೋಡಿಕೊಳ್ಳಬೇಕು. ಹಾಗೂ ಪರೀಕ್ಷೆಯ ದಿನದಂದು ಜಿಲ್ಲಾ ಹಾಗೂ ತಾಲ್ಲೂಕು ಮೇಲ್ವಿಚಾರಕರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
7ನೇ ಸ್ಥಾನ ಪಡೆದಿದ್ದ ಚಾಮರಾಜನಗರ ಜಿಲ್ಲೆ
ಅಲ್ಲದೆ ಇತೀಚೆಗಷ್ಟೇ 2022-23ರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿತ್ತು. ಚಾಮರಾಜನಗರ ಜಿಲ್ಲೆಗೆ ಶೇಕಡಾ 93.92ರಷ್ಟು ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಜಿಲ್ಲೆಯು 7ನೇ ಸ್ಥಾನ ಪಡೆದುಕೊಂಡಿತ್ತು.
ಜಿಲ್ಲೆಯಲ್ಲಿ 5,524 ಬಾಲಕರು, 5,622 ಬಾಲಕಿಯರು ಸೇರಿದಂತೆ ಒಟ್ಟು 11146 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಪೈಕಿ 5086 ಬಾಲಕರು, 5328 ಬಾಲಕಿಯರು ಸೇರಿದಂತೆ ಒಟ್ಟು 10468 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಒಟ್ಟಾರೆ ಶೇ. 93.92 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿ ಕಳೆದ ಬಾರಿಗಿಂತ ಶೇ. 2ರಷ್ಟು ಫಲಿತಾಂಶ ಏರಿಕೆಯಾಗಿದೆ. ಕಳೆದ ವರ್ಷ 9ನೇ ಸ್ಥಾನದಲ್ಲಿದ್ದ ಜಿಲ್ಲೆಯು ಈ ಬಾರಿ 7ನೇ ಸ್ಥಾನಕ್ಕೆ ಏರಿದೆ.
ಕನ್ನಡ ಮಾಧ್ಯಮ ಫಲಿತಾಂಶವು ಶೇ.92.10ರಷ್ಟಿದ್ದರೆ, ಆಂಗ್ಲ ಮಾಧ್ಯಮ ಫಲಿತಾಂಶವು ಶೇ. 97.88 ರಷ್ಟಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೇ. 94.08ರಷ್ಟು, ನಗರ ಪ್ರದೇಶದ ವಿದ್ಯಾರ್ಥಿಗಳು ಶೇ. 93.63ರಷ್ಟು ತೇರ್ಗಡೆ ಹೊಂದಿದ್ದಾರೆ. ಶಾಲಾವಾರು ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಶೇ. 93.50 ರಷ್ಟು, ಅನುದಾನಿತ ಶಾಲೆಗಳು ಶೇ. 91.28ರಷ್ಟು, ಅನುದಾನ ರಹಿತ ಶಾಲೆಗಳು ಶೇ. 97.74ರಷ್ಟು ಫಲಿತಾಂಶ ಪಡೆದಿವೆ.
ಕೊಳ್ಳೇಗಾಲ ಶೇ. 98.09ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ಯಳಂದೂರು ಶೇ. 96.26ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಹನೂರು ಶೇ. 95.03ರಷ್ಟು ಫಲಿತಾಂಶದೊಂದಿಗೆ ಮೂರನೇ ಸ್ಥಾನದಲ್ಲಿದೆ. ಗುಂಡ್ಲುಪೇಟೆ ಶೇ. 93.20ರಷ್ಟು ಫಲಿತಾಂಶದೊಂದಿಗೆ ನಾಲ್ಕನೇ ಸ್ಥಾನ ಹಾಗೂ ಚಾಮರಾಜನಗರ ಶೇ. 50.80ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಜಿಲ್ಲೆಯಲ್ಲಿ ಒಟ್ಟು 49 ಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದಿವೆ. ಇದರಲ್ಲಿ ಸರ್ಕಾರಿ ಶಾಲೆಗಳು 14, ಅನುದಾನಿತ ಶಾಲೆಗಳು 9 ಹಾಗೂ ಅನುದಾನ ರಹಿತ ಶಾಲೆಗಳು 26 ಇವೆ. ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದ ಶ್ರೀಜಾ. ಜೆ.ಬಿ, ಪಲ್ಲವಿ ಕೆ. ಹಾಗೂ ನಿಸರ್ಗ ಶಾಲೆಯ ತೇಜಸ್ವಿನಿ ಆರ್. ಅವರು 619 ಗರಿಷ್ಠ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುನಾಥ್ ತಿಳಿಸಿದ್ದರು.












Click it and Unblock the Notifications