ಸರ್ಕಾರಿ ಕಾರು ನನಗೆ ಅವಶ್ಯಕತೆ ಇಲ್ಲ: ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ
ಚಿಕ್ಕಮಗಳೂರು, ಜುಲೈ 27: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
Recommended Video
ಈ ಸಂಬಂಧ ಪ್ರತಿಕ್ರಿಯೆಗೆ ನಿರಾಕರಿಸಿದ ಶಾಸಕ ಕುಮಾರಸ್ವಾಮಿ, ನಿಗಮ ಮಂಡಳಿ, ಸರ್ಕಾರದ ಕಾರು ಯಾವುದು ನನಗೆ ಬೇಡ, ಸಾಯಲಿ ಬಿಡಿ ಎಂದು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನಗೆ ಸರ್ಕಾರದ ಕಾರು, ಅಧಿಕಾರ ಬೇಡ ನನ್ನ ಕ್ಷೇತ್ರಕ್ಕೆ ಅನುದಾನ ಕೊಟ್ಟರೆ ಸಾಕು. ನನಗೆ ಸರ್ಕಾರಿ ವಾಹನದ ಅಗತ್ಯ ಇಲ್ಲ ಎಂದು ಸರ್ಕಾರದ ವಿರುದ್ಧ ಪರೋಕ್ಷ ಅಸಮಾಧಾನ ಹೊರ ಹಾಕಿದರು.
ಎಂ.ಪಿಕುಮಾರಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. ನನಗೆ ಅಷ್ಟು ದೊಡ್ಡ ಹುದ್ದೆ ಕೊಟ್ಟರೆ ಹೇಗೆ, ಏನೂ ಬೇಡ, ನಾನು ಯಾವ ನಿಗಮ ಮಂಡಳಿಯನ್ನೂ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ರಚನೆಯಾಗಿ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೂ ಶಾಸಕ ಎಂ.ಪಿ ಕುಮಾರಸ್ವಾಮಿ ಹೋಗಿರಲಿಲ್ಲ. ಆಗಲೂ ಅಸಮಾಧಾನ ಏನಿಲ್ಲ. ಮೂರು ಬಾರಿ ಶಾಸಕ ಆಗಿದ್ದೇನೆ, ನನ್ನನ್ನೂ ಸಚಿವ ಸ್ಥಾನಕ್ಕೆ ಪರಿಗಣಿಸಬೇಕಿತ್ತು. ಮುಂದೆ ಸಿಗಬಹುದು ನೋಡೋಣ ಎಂದಿದ್ದರು. ಆದರೆ ಈಗ ನಿಗಮ ಮಂಡಳಿಗೆ ನೇಮಕ ಮಾಡಿರುವುದರಿಂದ ಸರ್ಕಾರದ ವಿರುದ್ಧ ಸಹಜವಾಗಿಯೇ ಅಸಮಾಧಾನಗೊಂಡಿದ್ದಾರೆ.












Click it and Unblock the Notifications