ಅಕ್ರಮ ಭೂ ಮಂಜೂರಾತಿ ಪ್ರಕರಣ: ಕಾರವಾರ ಸೀಬರ್ಡ್ ಭೂಸ್ವಾಧೀನ ಅಧಿಕಾರಿ ಬಂಧನ
ಚಿಕ್ಕಮಗಳೂರು, ಆಗಸ್ಟ್, 25: ಅಕ್ರಮ ಭೂ ಮಂಜೂರಾತಿ ಪ್ರಕರಣದ ಆರೋಪಿ ಈ ಹಿಂದಿನ ಕಡೂರು ತಾಲೂಕು ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಕಡೂರು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾರವಾರದ ಸೀ ಬರ್ಡ್ ಭೂಸ್ವಾಧೀನ ಅಧಿಕಾರಿಯಾಗಿದ್ದ ಜೆ.ಉಮೇಶ್ ಅವರು ಅಕ್ರಮ ಭೂ ಮಂಜೂರಾತಿ ಆರೋಪ ಎದುರಿಸುತ್ತಿದ್ದರು. ಅವರು ಇತ್ತೀಚೆಗೆ ಕಾರವಾರ ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಅಕ್ರಮ ಬಹುಮಂಜೂರಾತಿ ಸಂಬಂಧ ತರೀಕೆರೆ ಉಪ ವಿಭಾಗ ಅಧಿಕಾರಿ ಕಡೂರು ಪೊಲೀಸ್ ಠಾಣೆಯಲ್ಲಿ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಿಂದ ತಹಶೀಲ್ದಾರ್ ಜೆ.ಉಮೇಶ್ ಕಣ್ಮರೆಯಾಗಿದ್ದರು. ಇದೀಗ ಅಕ್ರಮ ಭೂ ಮಂಜೂರಾತಿ ಪ್ರಕರಣದ ಆರೋಪಿ ಉಮೇಶ್ ಅವರನ್ನು ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿನ ಭೂ ಅಕ್ರಮ ಮಂಜೂರಾತಿ ಸಂಬಂಧ ಸರ್ಕಾರ 15 ಜನ ತಹಶೀಲ್ದಾರ್ ಉಳ್ಳ ತಂಡವನ್ನು ರಚಿಸಿದ್ದು, ಈ ತಂಡ ತನಿಕೆಯಲ್ಲಿ ನಿರತವಾಗಿದೆ. ತನಿಕೆಯಿಂದ ಅಪಾರ ಪ್ರಮಾಣದ ಅಕ್ರಮ ಭೂ ಮಂಜೂರಾತಿ ಬೆಳಕಿಗೆ ಬರುತ್ತಿದ್ದು, ಸದ್ಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಅವರ ಬಂಧನವಾಗಿದೆ. ಇನ್ನು ಪ್ರಕರಣದ ಉಳಿದ ಇಬ್ಬರು ಅಧಿಕಾರಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.












Click it and Unblock the Notifications