ಶೃಂಗೇರಿ ಮೆಸ್ಕಾಂ ಕಚೇರಿ ಒಳಗಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ
ಚಿಕ್ಕಮಗಳೂರು, ಡಿಸೆಂಬರ್ 24 : ಮೆಸ್ಕಾಂ ಕಚೇರಿ ಒಳಗಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ.
ಸರ್ಕಾರಿ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಭಾವಚಿತ್ರವನ್ನ ಹಾಕಲಾಗಿದ್ದು, ಅದರಲ್ಲಿ ಚಪ್ಪಲಿ ಗುರುತು ಕಂಡು ಬಂದಿದೆ. ಈ ವಿಚಾರವನ್ನು ಗಮಿಸಿದ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದಲಿತ ಸಂಘಟನೆಗಳು ಅಂಬೇಡ್ಕರ್ ಫೋಟೋವನ್ನು ಸ್ವಚ್ಛಗೊಳಿಸಿ ಹೂವಿನ ಹಾರ ಹಾಕಿದ್ದಾರೆ. ಕಚೇರಿ ಒಳಗಿದ್ದ ಅಂಬೇಡ್ಕರ್ ಫೋಟೋಗೆ ಅಪಮಾನವಾದರೂ ಅಧಿಕಾರಿಗಳು ದೂರು ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ ದಲಿತ ಸಂಘಟನೆಯ ಕಾರ್ಯಕರ್ತರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಕೇಡಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಆದರೆ, ಕಚೇರಿ ಒಳಗಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದು ಯಾರು ಎಂಬ ಯಕ್ಷ ಪ್ರಶ್ನೆ ಮೂಡಿದ್ದು, ಶೃಂಗೇರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.

ದೋಷರಹಿತ ಮತದಾರರ ಪಟ್ಟಿ ತುಂಬಾ ಅತ್ಯವಶ್ಯಕ-ಸಿ.ಶಿಖಾ
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನ್ಯಾಯ ಸಮ್ಮತ ಚುನಾವಣೆ ನಡೆಸಲು ದೋಷರಹಿತ ಮತದಾರರ ಪಟ್ಟಿ ತುಂಬಾ ಅತ್ಯವಶ್ಯಕ. ಹೀಗಾಗಿ ಪಾರದರ್ಶಕ ವಾಗಿ, ದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರು ಹಾಗೂ ಚಿಕ್ಕಮಗಳೂರು ಜಿಲ್ಲೆ ಮತದಾರರ ಪಟ್ಟಿ ವೀಕ್ಷಕರಾದ ಸಿ.ಶಿಖಾ ತಿಳಿಸಿದರು.
ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ನೋಂದಣಾಧಿಕರಿಗಳೊಂದಿಗೆ ವಸ್ತಾರೆಯ ಭೂತ್ ನಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ದಾಖಲಾಗುವ ದೂರುಗಳನ್ನು ಪ್ರಥಮಾದ್ಯತೆ ಮೇಲೆ ವಿಲೇವಾರಿ ಮಾಡಬೇಕು. ವಿಳಂಬ ಸಲ್ಲದ ಅವರು ಮತದಾರರ ಪಟ್ಟಿ ಪರಿಷ್ಕರಣೆ ಭಾಗವಾಗಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಡಿಲೀಟ್, ವರ್ಗಾವಣೆಗೆ ಅರ್ಜಿ ಸಲ್ಲಿಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಕೂಡಲೆ ವೀಲೆವಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಮತದಾರರ ಹೆಸರನ್ನು ಡಿಲೀಟ್ ಮಾಡುವಾಗ ಸರಿಯಾದ ಬದಲಾವಣೆಯನ್ನು ಅನುಸರಿಸಬೇಕು ಮತದಾರರ ಪಟ್ಟಿಯಲ್ಲಿ ಯಾವುದೇ ಹೆಸರುಗಳು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಇದೇ ವೇಳೆ ಚಿಕ್ಕಮಗಳೂರು ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಭೂತ್‌ಗಳಿಗೆ ತೆರಳಿ ಪರಿಶಿಲನೆ ನಡೆಸಿದರು.
ಈ ವೇಳೆ ಅಪಾರ ಜಿಲ್ಲಾಧಿಕಾರಿ ಬಿ.ಆರ್. ರೂಪ, ಉಪವಿಭಾಧಿಕಾರಿ ರಾಜೇಶ್, ಚಿಕ್ಕಮಗಳೂರು ತಹಶೀಲ್ದಾರ್ ವಿನಾಯಕ ಸಾಗರ್ ಚುನಾವಣೆ ಶಾಖೆ ತಹಶೀಲ್ದಾರ್ ಶಿವಶರಣ ಕುಟ್ಟೊಳ್ಳಿ ಹಾಜರಿದ್ದರು.












Click it and Unblock the Notifications