BREAKING: ಮಾಧುಸ್ವಾಮಿ ಕಾರು ಅಪಘಾತ.!

ಚಿಕ್ಕಮಗಳೂರು, ಏಪ್ರಿಲ್‌, 22: ಲೋಕಸಭಾ ಚುನಾವಣೆ ಹಿನ್ನೆಲೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಅವರ ಕಾರು ಎದುರಿಗೆ ಒನ್‌ ವೇನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಾಡೂರಿನ ಹೇಮಗಿರಿ ಬಳಿ ನಡೆದಿದೆ.

ಪ್ರಜ್ವಲ್‌ ರೇವಣ್ಣ ಅವರ ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಅವರು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಒನ್‌ ವೇನಲ್ಲಿ ಒನ್ ವೇಯಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ, ಎದುರಿಗೆ ಬರುತ್ತಿದ್ದ ಕಾರಿಗೆ ಅವರ ಕಾರು ಡಿಕ್ಕಿ ಹೊಡೆದಿದೆ

J C Madhu Swamy Car accident in Hemagiri

ಈ ಘಟನೆ ಇಂದು (ಏಪ್ರಿಲ್‌ 22) ಬೆಳಗ್ಗೆ ಸುಮಾರು 11:10 ವೇಳೆಗೆ ಕಾಡೂರಿನ ಹೇಮಗಿರಿ ಬಳಿಯ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಸದ್ಯ ಅಪಘಾತದಲ್ಲಿ ಮಾಧುಸ್ವಾಮಿ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಬೀರೂರಿನಲ್ಲಿ ಕಾರ್ಯಕ್ರಮ ಇದ್ದು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+