ಪಾದರಾಯನಪುರ ಗಲಭೆ ಖಂಡನಾರ್ಹ: ಜೆಡಿಎಸ್ ಮುಖಂಡ
ಚಿಕ್ಕಮಗಳೂರು, ಏಪ್ರಿಲ್ 20: ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ನಡೆದ ಹಲ್ಲೆಯ ಘಟನೆ ದುರದೃಷ್ಟಕರ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಹೇಳಿದ್ದಾರೆ.
ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು. ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ತಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ನಾನು ಆದರೂ ಅಷ್ಟೇ, ಬೇರೆ ಯಾರು ಆದರೂ ಅಷ್ಟೇ. ಇಂತಹ ತಪ್ಪು ಮಾಡಿದವರಿಗೆ ಕಾನೂನು ರೀತಿ ಕಠಿಣ ಕ್ರಮ ತಗೆದುಕೊಳ್ಳಬೇಕು ಎಂದರು.

ಗಲಭೆ ಮಾಡುವವರನ್ನು ದೇಶದ್ರೋಹಿಗಳು ಎನ್ನಬಹುದು. ಪಾದರಾಯನಪುರದಲ್ಲಿ ನಡೆದ ಗಲಭೆಯ ಘಟನೆ ಇಡೀ ಸಮಾಜವೇ ತಲೆತಗ್ಗಿಸುವಂತಹ ವಿಚಾರವಾಗಿದೆ ಎಂದು ಹೇಳಿದರು.
ಕೊರೊನಾ ವೈರಸ್ ವಿರುದ್ಧ ಹೋರಾಟದ ಈ ಸಮಯದಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡುವುದು ದುರದೃಷ್ಟಕರ ಎಂದು ಚಿಕ್ಕಮಗಳೂರಿನಲ್ಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಭೋಜೇಗೌಡ ಅಭಿಪ್ರಾಯಪಟ್ಟರು.












Click it and Unblock the Notifications