ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಜೀಪ್‌: ಚಾಲಕಿ ಅಕ್ಷತಾ ಸ್ಥಳದಲ್ಲೇ ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್‌23 : ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಹಳ್ಳಕ್ಕೆ ಬಿದ್ದ ಪರಿಣಾಮ ಚಾಲಕಿ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಅಕ್ಷತಾ(35 ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಪಲ್ಟಿಯಾದ ಬಳಿಕ ಜೀಪ್ ಹಳ್ಳದ ನೀರಿಗೆ ಬಿದ್ದಿದೆ. ಜೀಪ್‌ನಲ್ಲಿ ಅಕ್ಷತಾ ಒಬ್ಬರೇ ಇದ್ದು, ಅವರೇ ಚಲಾಯಿಸುತ್ತಿದ್ದರು ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದ್ದು, ಅಕ್ಷತಾರನ್ನು ಮೇಲಕ್ಕೆ ಎತ್ತಿದ್ದಾರೆ. ಆದರೆ ದುರಾದೃಷ್ಟವಶಾತ್ ಅಷ್ಟರಲ್ಲಿ ಅಕ್ಷತಾ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಚಿತ್ರದುರ್ಗದಲ್ಲಿ ಸಿಎಂ ಬೆಂಗಾವಲು ವಾಹನ-ಬೈಕ್‌ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರಚಿತ್ರದುರ್ಗದಲ್ಲಿ ಸಿಎಂ ಬೆಂಗಾವಲು ವಾಹನ-ಬೈಕ್‌ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ

20 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು: ಐವರು ಪ್ರಾಣಾಪಾಯದಿಂದ ಪಾರು

ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಮತ್ತೊಂದು ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯಮಾರುತ ಬಳಿ ಈ ಘಟನೆ ನಡೆದಿದೆ.

Jeep Accident At Chikkamagaluru Kalasa Taluk

ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 20 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಕಾರಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಎಲ್ಲರಿಗೂ ಸಣ್ಣ-ಪುಟ್ಟ ಗಾಯವಾಗಿದ್ದು ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ಸಂಬಂಧ ಸೂರು ದಾಖಲಾಗಿದೆ.

ವಿಜಯನಗರದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದಾರುಣ ಸಾವು

ವಿಜಯನಗರ: ರಸ್ತೆ ತಿರುವಿನಲ್ಲಿ ಬೈಕ್ ಸಮೇತ ಗುಂಡಿಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಆನೆಕಲ್ ತಾಂಡಾದ ಹೊರವಲಯದಲ್ಲಿ ನಡೆದಿದೆ.

ಹಗರಿಬೊಮ್ಮನಹಳ್ಳಿ ತಾಲೂಕಿನ ಬಸರಕೋಡು ಗ್ರಾಮದ ನಿವಾಸಿಗಳಾದ ಸುನಿಲ್ ನಾಯ್ಕ್‌ (21) ಮತ್ತು ಪೂಜಾ (14) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

Jeep Accident At Chikkamagaluru Kalasa Taluk

ಘಟನೆಯಲ್ಲಆಕಾಶ ನಾಯ್ಕ ಎಂಬಾತನಿಗೆ ಗಾಯಗಳಾಗಿದ್ದು, ಆತನನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸ್ಥಳಕ್ಕೆ ವಿಜಯನಗರ ಎಸ್‌ಪಿ ಶ್ರೀಹರಿಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Women died in Jeep accident at chikkamagaluru district kalasa taluk. and more accident news
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X