Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿನ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಬಗ್ಗೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಿಷ್ಟು

ಚಿಕ್ಕಮಗಳೂರು, ಆಗಸ್ಟ್‌, 16: ರಾಜ್ಯಾದ್ಯಂತ ತಲೆದೋರಿರುವ ವಿದ್ಯುತ್ ಅಭಾವ ನೀಗಿಸುವ ನಿಟ್ಟಿನಲ್ಲಿ ವಿದ್ಯುತ್ ಸಬ್ ಸ್ಟೇಷನ್‍ಗಳಿಗೆ ಸೋಲಾರ್ ಪ್ಲಾಂಟ್ ಅಳವಡಿಸಲು ಸರ್ವೇ ಕಾರ್ಯ ನಡೆಸಲಾಗುತ್ತಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಚಿಕ್ಕಮಗಳೂರಿನಲ್ಲಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗುತ್ತಿದೆ. ವಿದ್ಯುತ್ ಕೊರತೆ ನೀಗಿಸಲು ಥರ್ಮಲ್ ವಿದ್ಯುತ್ ಮತ್ತು ವಿಂಡ್ ಪವರ್‍ ಅನ್ನು ಅವಲಂಭಿಸಿಬೇಕಾಗಿದೆ. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಸರ್ವೀಸ್ ಮಾಡಲಾಗುತ್ತದೆ. ಇದರಿಂದ ಥರ್ಮಲ್ ವಿದ್ಯುತ್ ಉತ್ಪಾದನೆ ಕಡಿಮೆಯಾದ್ದು, ಥರ್ಮಲ್ ವಿದ್ಯುತ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದೇನೆ ಎಂದರು.

K.J.George reaction on electricity load shedding

ಕಳೆದೊಂದು ವಾರದಿಂದ ವಾತಾವರಣದಲ್ಲಿ ಗಾಳಿಯ ವೇಗ ಕಡಿಮೆಯಾಗಿರುವುದರಿಂದ ವಿಂಡ್ ಪವರ್ ಉತ್ಪಾದನೆಗೂ ಸಮಸ್ಯೆಯಾಗಿದೆ. ಆದ್ದರಿಂದ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದರು. ಶೀಘ್ರದಲ್ಲೇ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆಯನ್ನು ನಿವಾರಿಸುವುದು ಹಾಗೂ ವಿದ್ಯುತ್ ಉತ್ಪಾದನೆಯ ಅಭಾವವನ್ನು ಕಡಿಮೆ ಮಾಡಲು ವಿದ್ಯುತ್ ಸಬ್ ಸ್ಟೇಷನ್‍ಗಳಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆ ಬಗ್ಗೆ ಚಿಂತನೆ ಮಾಡಲಾಗಿದೆ ಎಂದರು.

ಸಬ್ ಸ್ಟೇಷನ್‍ಗಳಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆಗಾಗಿ ಸರ್ವೇ ಕಾರ್ಯ ನಡೆಯುತ್ತಿದೆ ಎಂದ ಅವರು, ರೈತರಿಗೆ ಅನುಕೂಲ ಆಗುವಂತೆ ಪಂಪ್‍ಸೆಟ್‍ಗಳಿಗೂ ಸೋಲಾರ್ ವಿದ್ಯುತ್ ಅಳವಡಿಕೆ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ. ಇದಕ್ಕೆ ಕೆಲ ಅಡೆತಡೆಗಳಿದ್ದು, ಅದನ್ನು ಸರಿಪಡಿಸಲಾಗುವುದು ಎಂದರು.

5 ಗ್ಯಾರಂಟಿಗಳು ಜನಸಾಮಾನ್ಯರ ಮನಮುಟ್ಟಿವೆ

ರಾಜ್ಯ ಸರ್ಕಾರದ 5 ಗ್ಯಾರೆಂಟಿಗಳು ಜನಸಾಮಾನ್ಯರ ಮನಮುಟ್ಟಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನುಡಿದಂತೆ ನಡೆದಿದ್ದಾರೆ. ರಾಜ್ಯದಲ್ಲಿ 5 ಗ್ಯಾರಂಟಿಗಳು ಯಶಸ್ವಿಯಾಗಿದ್ದು, ಎಐಸಿಸಿ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಬೆಂಬಲವೂ ಇದಕ್ಕೆ ಕಾರಣ ಎಂದರು.

ಇನ್ನು ನೋಟು ಅಮಾನ್ಯೀಕರಣ, ಕೋವಿಡ್‍ನಿಂದ ಜನರು ಆರ್ಥಿಕವಾಗಿ ಕುಸಿದು ಹೋಗಿದ್ದರು. ಬೆಲೆ ಏರಿಕೆಯಿಂದ ಬೇಸತ್ತಿದ್ದರು. ಆದ್ದರಿಂದ ಆರ್ಥಿಕವಾಗಿ ಕುಗ್ಗಿದ ಜನರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ 5 ಗ್ಯಾರೆಂಟಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡುತ್ತಿದ್ದು, ಈ ಮೂಲಕ ಜನರ ಹಣವನ್ನು ಜನರಿಗೆ ನೀಡಲಾಗುತ್ತಿದೆ. ನಾವು ಯಾವುದನ್ನೂ ಫ್ರೀಯಾಗಿ ನೀಡುತ್ತಿಲ್ಲ ಎಂದರು.

ತನಿಖೆಗೆ ತಂಡ ರಚನೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ಭೂ ಅಕ್ರಮ ಮಂಜೂರಾತಿ ಸಂಬಂಧ ತನಿಖೆಗೆ ತಂಡ ರಚಿಸಲಾಗಿದೆ. ತಂಡ ತನಿಖೆ ನಡೆಸಿ ವರದಿ ನೀಡಿದ ಮೇಲೆ ಅಕ್ರಮ ಭೂ ಮಂಜೂರಾತಿಯನ್ನು ವಶಕ್ಕೆ ಪಡೆಯುವ ಸಂಬಂಧ ಕಂದಾಯ ಸಚಿವರು ತೀರ್ಮಾನ ತಗೆದುಕೊಳ್ಳಲಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರಿಗೆ ಕಾನೂನಾತ್ಮಕ ಶಿಕ್ಷೆಯಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕ ಎಚ್.ಡಿ.ತಮ್ಮಯ್ಯ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+