ಇತಿಹಾಸ ಪ್ರಸಿದ್ಧ ಮದಗದ ಕೆರೆ ಕೋಡಿ ಬೀಳಲು ಕ್ಷಣಗಣನೆ ಆರಂಭ
ಚಿಕ್ಕಮಗಳೂರು, ಜುಲೈ, 29: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವೆಡೆ ನದಿ, ಹಳ್ಳ, ಕೆರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಸುತ್ತಮುತ್ತ ಕಳೆದೊಂದು ವಾರದಿಂದ ಭಾರೀ ಮಳೆಯಾಗಿದ್ದು, ಕಡೂರು ತಾಲೂಕಿನ ಇತಿಹಾಸ ಪ್ರಸಿದ್ದ ಮದಗದ ಕೆರೆ ಕೋಡಿ ಬೀಳಲು ಕ್ಷಣಗಣನೆ ಆರಂಭವಾಗಿದೆ.
ಕಳೆದ ಒಂದು ತಿಂಗಳ ಹಿಂದೆ ಮದಗದ ಕೆರೆ ನೀರಿನಲ್ಲದೇ ಒಣಗಿ ಹೋಗಿತ್ತು. ಆದರೆ ಜುಲೈ ತಿಂಗಳ ಮಧ್ಯದಲ್ಲಿ ಗಿರಿ ಭಾಗದಲ್ಲಿ ಧಾರಾಕಾರವಾಗಿ ಸುರಿದ ಭಾರೀ ಮಳೆಯಿಂದಾಗಿ ಈ ಕೆರೆಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ಕೆರೆ ಭರ್ತಿಯಾಗಿರುವ ಸುದ್ದಿಯಿಂದಾಗಿ ಸುತ್ತಮುಲ್ಲ ಗ್ರಾಮಗಳ ಜನರು, ರೈತರು ಸಂತಸಗೊಂಡಿದ್ದಾರೆ.

ಇನ್ನು ಈ ಕೆರೆ ಕೋಡಿ ಬಿದ್ದಲ್ಲಿ ಕಡೂರು ತಾಲೂಕಿನ ನೂರಾರು ಹಳ್ಳಿಗಳ ರೈತರಿಗೆ ಅನುಕೂಲ ಆಗಲಿದೆ. ಅಲ್ಲದೇ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಜಲಾಶಯಕ್ಕೂ ಈ ಕೆರೆಯ ನೀರು ನಾಲೆ ಮೂಲಕ ಸೇರಲಿದೆ.
ಪ್ರವಾಸಿಗರಿಗೆ ನಿರ್ಬಂಧ
ಭಾರೀ ಮಳೆ ಹಿನ್ನೆಲೆ ಹಲವು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಪಶ್ಚಿಮ ಘಟ್ಟಗಳಂತಹ ಪ್ರವಾಸಿ ತಾಣಗಳಲ್ಲಿ ಜಲಮೂಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಅದರಲ್ಲೂ ವೀಕೆಂಡ್‌ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿಬ್ಬಂದಿ ಮುಂಜಾಗ್ರತಾ ಕ್ರಮವಹಿಸಿದ್ದು, ಕೈಮರ ಚೆಕ್ ಪೋಸ್ಟ್‌ನಲ್ಲೇ ಪ್ರವಾಸಿಗನ್ನು ತಡೆದು ವಾಪಾಸ್ ಕಳುಹಿಸುತ್ತಿದ್ದಾರೆ.
ಅಲ್ಲದೆ 2-3 ದಿನದಿಂದ ಜಿಲ್ಲೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮನವಿ ಮಾಡುತ್ತಲೇ ಇದೆ. ಆದರೆ ಪ್ರವಾಸಿಗರು ಮನವಿಗೆ ಸ್ಪಂದಿಸದ ಹಿನ್ನೆಲೆ ಜಿಲ್ಲೆಯ ಗಿರಿ ಪ್ರದೇಶಗಳು ಸೇರಿದಂತೆ ಹಲವು ಪ್ರವಾಸಿ ತಾಣಗಳ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ












Click it and Unblock the Notifications