ಚಿಕ್ಕಮಗಳೂರು; ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಸೋಮನಹಳ್ಳಿ ತಾಂಡದ ರಕ್ಷಿತಾ; ಕುಟುಂಬಕ್ಕೆ 8 ಲಕ್ಷ ಪರಿಹಾರ

ಚಿಕ್ಕಮಗಳೂರು, ಸೆಪ್ಟೆಂಬರ್‌, 23: ಚಿಕ್ಕಮಗಳೂರು ಜಿಲ್ಲೆ ಸೋಮನಹಳ್ಳಿ ತಾಂಡದ ಪಿಯು ವಿದ್ಯಾರ್ಥಿನಿ ರಕ್ಷಿತಾ ಸಾವನ್ನಪಿದ್ದು, ಆಕೆಯ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ಒಪ್ಪಿದ್ದರು. ಹೀಗೆ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬಕ್ಕೆ 8 ಲಕ್ಷ ಪರಿಹಾರವನ್ನು ನೀಡಲಾಗಿದೆ. ಮೆದುಳು ನಿಷ್ಕ್ರಿಯಗೊಂಡ ಬಳಿಕ ರಕ್ಷಿತಾಳ 9 ಅಂಗಾಂಗಳನ್ನು ದಾನ ಮಾಡಿದ್ದ ಕುಟುಂಬಸ್ಥರಿಗೆ ಪರಿಹಾರವನ್ನು ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಕ್ಷಿತಾ 5 ದಿನದ ಹಿಂದೆ ಬಸ್ ಹತ್ತುವಾಗ ಬಿದ್ದಿದ್ದಳು. ಪರಿಣಾಮ ಮೆದುಳು ನಿಷ್ಕ್ರಿಯಗೊಂಡು ಆಕೆ ಸಾವನ್ನಪ್ಪಿದ್ದಳು. ನಂತರ ವೈದ್ಯರ ಸಲಹೆಯ ಮೇರೆಗೆ ಆಕೆಯ ಪೋಷಕರು ಮಗಳ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆಯನ್ನು ಸೂಚಿಸಿದ್ದರು.

ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದ ರಕ್ಷಿತಾಳ ಕುಟುಂಬಕ್ಕೆ 8 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ತಾಂಡ ಅಭಿವೃದ್ಧಿ ನಿಗಮದಿಂದ 1 ಲಕ್ಷ ಪರಿಹಾರ ನೀಡಲಾಗಿದೆ. ಇನ್ನ ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ಪರಿಹಾರವನ್ನು ಮಂಜೂರು ಮಾಡಲಾಗಿದೆ. ಹೀಗೆ ಒಟ್ಟು ಎಂಟು ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ತಾಂಡ ಅಭಿವೃದ್ಧಿ ನಿಗಮ ಹಾಗೂ ಉದ್ಯಮಶೀಲತೆ ಯೋಜನೆಯಡಿಯಲ್ಲಿ ಸೋಮನಹಳ್ಳಿ ತಾಂಡಾಗೆ ಬಂದು ಕುಡುಚಿ ಶಾಸಕ ಪಿ.ರಾಜೀವ್ ಚೆಕ್ ನೀಡಲಿದ್ದಾರೆ.

Kadur: Somanahalli tanda student Rakshita family gets 8 lakh compensation

ರಕ್ಷಿತಾಗೆ ಕಣ್ಣೀರಿನ ವಿದಾಯ ಹೇಳಿದ ಸ್ನೇಹಿತೆಯರು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸೋಮನಹಳ್ಳಿ ತಾಂಡದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ರಕ್ಷಿತಾಳ ಅಂಗಾಗಗಳನ್ನು ದಾನ ಮಾಡುವ ಮೂಲಕ ಆಕೆಯ ಕುಟುಂಬದವರು ಸಾರ್ಥಕತೆ ಮೆರೆದಿದ್ದರು. ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಉಜಿರೆ, ಬೆಳ್ತಂಗಡಿ, ಮಂಗಳೂರು ಮೂಲಕ ಝೀರೋ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್‌ನಲ್ಲಿ ಅಂಗಾಂಗಗಳನ್ನು ಸಾಗಾಟ ಮಾಡಲಾಗಿತ್ತು.

ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿನಿಂದ ಬೆಂಗಳೂರಿನ ಕಡೆಗೆ ರಕ್ಷಿತಾಳ ಜೀವಂತ ಹೃದಯವನ್ನು ತೆಗೆದುಕೊಂದು ಹೋಗಲಾಗಿತ್ತು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಗಿದೆ. ಯುವತಿ ರಕ್ಷಿತಾಳ ಒಟ್ಟು ಒಂಭತ್ತು ಅಂಗಗಳನ್ನು ದಾನ ಮಾಡಿ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. ಸಾವನ್ನಪಿ ರಕ್ಷಿತಾಳನ್ನು ನೆನೆದು ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರೆಲ್ಲ ಕಣ್ಣೀರಿಟ್ಟಿದ್ದಾರೆ. ವಿದ್ಯಾರ್ಥಿನಿ ರಕ್ಷಿತಾಗೆ ಸಾವಿರಾರು ವಿದ್ಯಾರ್ಥಿನಿಯರು ಕಣ್ಣೀರಿನ ವಿದಾಯ ಹೇಳಿದ್ದಾರೆ.

ವಿದ್ಯಾರ್ಥಿನಿ ರಕ್ಷಿತಾಳ ಅಂಗಾಂಗ ದಾನ

ಚಿಕ್ಕಮಗಳೂರು ನಗರದ ಬಸವನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯುವತಿ ವ್ಯಾಸಂಗ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಮನೆಗೆ ಹಿಂದಿರುವಾಗ ಬಸ್ಸಿನಿಂದ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡಿದ್ದ ರಕ್ಷಿತಾಳನ್ನು ಸ್ಥಳೀಯರು, ಸಂಬಂಧಿಕರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ ರಕ್ಷಿತಾಳ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ ಆಕೆಯನ್ನು ಬದುಕಿಸಲು ಸಾಧ್ಯವೇ ಇಲ್ಲ ಎಂದು ವೈದ್ಯರು ತಿಳಿಸಿದ್ದರು. ಕೊನೆಗೆ ರಕ್ಷಿತಾಳ ಬೇರೆಲ್ಲಾ ಅಂಗಾಂಗಗಳಿಗೆ ಯಾವುದೇ ತೊಂದರೆ ಅಗದ ಹಿನ್ನೆಲೆಯಲ್ಲಿ, ಅಂಗಾಂಗ ದಾನಕ್ಕೆ ನೀವು ಮುಂದಾಗಬಹುದು ಎಂದು ವೈದ್ಯರು ರಕ್ಷಿತಾಳ ಕುಟುಂಬಕ್ಕೆ ಮಾಹಿತಿ ಮಾಹಿತಿ ನೀಡಿದ್ದರು.

Kadur: Somanahalli tanda student Rakshita family gets 8 lakh compensation

ಮಗಳ ಅಂಗಾಂಗ ದಾನಕ್ಕೆ ಪೋಷಕರಿಂದ ಒಪ್ಪಿಗೆ

ದುಃಖದ ಸ್ಥಿತಿಯಲ್ಲೂ ರಕ್ಷಿತಾಳ ಪೋಷಕರಾದ ಲಕ್ಷ್ಮಿ ಬಾಯಿ, ಶೇಖರ್ ನಾಯ್ಕ್ ಮಗಳ ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಆಕೆಯ ಸಾವಿಗೆ ಸಾರ್ಥಕತೆ ಕೊಡಿಸಲು ಮುಂದಾಗಿದ್ದಾರೆ. ಎರಡು ಕಣ್ಣುಗಳು, ಹೃದಯ, ಕಿಡ್ನಿಗಳು, ಎರಡು ಶ್ವಾಸಕೋಶಗಳು ಸೇರಿ ಒಟ್ಟು ಒಂಭತ್ತು ಮಂದಿಗೆ ರಕ್ಷಿತಾಳ ಅಂಗಾಂಗಗಳನ್ನ ಜೋಡಿಸಲು ತೀರ್ಮಾನಿಸಲಾಗಿತ್ತು. ಇದಕ್ಕಾಗಿಯೇ ಚಿಕ್ಕಮಗಳೂರಿಗೆ ಬೆಂಗಳೂರು, ಚೆನ್ನೈಯಿಂದ ನುರಿತ ವೈದ್ಯರ ತಂಡ ಆಗಮಿಸಿತ್ತು. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿದ್ದ ರಕ್ಷಿತಾಳ ಅಂಗಾಂಗಗಳನ್ನು ಹೆಲಿಕ್ಯಾಪ್ಟರ್ ಮೂಲಕ ರವಾನೆ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿಕೊಂಡಿತ್ತು.

ಇದೀಗ ಮಗಳು ರಕ್ಷಿತಾಳ ಅಂಗಾಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದ ಕುಟುಂಬಕ್ಕೆ ಸರ್ಕಾದಿಂದ 8 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+