ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಲ್ಕನೇ ಬಾರಿಯೂ ನೆಗೆಟಿವ್ ಬಂತು ಕಡೂರು ವಿದ್ಯಾರ್ಥಿ ಸೋಂಕಿನ ವರದಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್ 17: ಕೊರೊನಾ ವೈರಸ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ವರದಿ ಇದೀಗ ನೆಗೆಟಿವ್ ಎಂದು ಬಂದಿದ್ದು, ಆತನನ್ನು ಬಿಡುಗಡೆ ಮಾಡಲಾಗಿದೆ.

ಏಳು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೆ. ದಾಸರಹಳ್ಳಿಯ ಎಸ್ ಎಸ್ಎಲ್ ಸಿ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದಾಗಿ ತಿಳಿಸಲಾಗಿತ್ತು. ನಂತರ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಕೊವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.‌

ಚಿಕ್ಕಮಗಳೂರಿನಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ನಲ್ಲೇ ದೋಷವಿದೆಯಾ?ಚಿಕ್ಕಮಗಳೂರಿನಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ನಲ್ಲೇ ದೋಷವಿದೆಯಾ?

ಏಳು ದಿನಗಳ ಹಿಂದೆ ಆಸ್ಪತ್ರೆಗೆ ಸೇರಿಸಿದ್ದು, ನಾಲ್ಕು ಬಾರಿ ಕೊರೊನಾ ವೈರಸ್ ಪರೀಕ್ಷೆ‌ಯನ್ನು ನಡೆಸಲಾಗಿತ್ತು. ನಾಲ್ಕು ಬಾರಿಯೂ ವರದಿ ನೆಗೆಟಿವ್ ಬಂದಿದ್ದು, ಇದೀಗ ವಿದ್ಯಾರ್ಥಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿದೆ.

Chikkamagaluru Student Coronavirus Report Came Negative Fourth Time

ವಿದ್ಯಾರ್ಥಿಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ. ಈ ಮೊದಲು ಬಂದಿದ್ದ ವಿದ್ಯಾರ್ಥಿಯ ವರದಿ ಫಾಲ್ಸ್ ಪಾಸಿಟಿವ್ ಇರಬಹುದೇ ಎಂಬುದನ್ನು ದೃಢಪಡಿಸಿಕೊಳ್ಳಲು ನಿಮಾನ್ಸ್‌ ಗೆ ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.

English summary
The report of an SSLC student who was tested coronavirus positive before one week is now tested negative fourth time and has been released from hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X