Kalasa Bandh: ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್

ಚಿಕ್ಕಮಗಳೂರು ಸೆಪ್ಟೆಂಬರ್ 11: ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿಂದು ಬಂದ್‌ಗೆ ಕರೆ ನೀಡಲಾಗಿದೆ. ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಕಳಸ ಬಂದ್ ಆಗಿರಲಿದೆ. ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಫಿ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ಒತ್ತುವರಿ ತೆರವು ನಿಲ್ಲಿಸಬೇಕೆಂದು ಒತ್ತಾಯಿಸಿ ಬೆಳಗ್ಗೆ 10 ಗಂಟೆಯಿಂದ ಕಳಸಾ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಸಲಿದ್ದಾರೆ. ಈ ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಬೆಂಬಲವನ್ನು ನೀಡಿವೆ. ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕನ್ನಡ, ದಲಿತ ಸೇರಿದಂತೆ ಬಹುತೇಕ ಸಂಘಟನೆಗಳು ಈ ಹೋರಾಟಕ್ಕೆ ಸಾಥ್ ನೀಡಿವೆ. ಕಳಸ ತಾಲೂಕು ಬಂದ್ ಹಿನ್ನಲೆಯಲ್ಲಿ ವಿವಿಧ ಗ್ರಾಮಗಳಿಂದ ಸಾವಿರಾರು ರೈತರು ಆಗಮಿಸಿದ್ದಾರೆ. ಹೀಗಾಗಿ ತಾಲೂಕಿನನಾದ್ಯಂತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

Kalasa taluk bandh condemns the eviction of encroachment by the karnataka government

ಸರ್ಕಾರದ ಬಂಜರು ಭೂಮಿಯನ್ನು ಸಾಗುವಳಿ ಮಾಡಿ ದೇಶಕ್ಕೆ ಆದಾಯ ತಂದುಕೊಟ್ಟ ಬೆಳೆಗಾರರು ಗ್ರಾಮೀಣ ಪ್ರದೇಶದಲ್ಲಿ ಶೇ.99 ಉದ್ಯೋಗ ಸೃಷ್ಟಿ ಮಾಡಿದ್ದಾರೆ. ಕೃಷಿ ಭೂಮಿ ಒತ್ತುವರಿ ತೆರವು ಮಾಡಿದರೆ ದೇಶದ ಆದಾಯ ಕಡಿಮೆಯಾಗಿ, ನಿರುದ್ಯೋಗ ಸಮಸ್ಯೆ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ.

ಕೃಷಿ ಭೂಮಿ ಒತ್ತುವರಿ ತೆರವು ಮಾಡಿದಾಗ ಹಲವು ಕುಟುಂಬಗಳು ಬೀದಿಗೆ ಬರುತ್ತವೆ. ಇದರಿಂದ ಸಮಾಜಘಾತುಕ ಚಟುವಟಿಕೆ ಕೂಡ ಹೆಚ್ಚಾಗಬಹುದು. ಬ್ಯಾಂಕ್‌ನಿಂದ ಕೃಷಿಕರು ಪಡೆದಿರುವ ಸಾಲವನ್ನು ಸಕಾಲದಲ್ಲಿ ಮರು ಪಾವತಿಸಲಾಗದೆ ಬ್ಯಾಂಕ್‌ಗಳಿಗೆ ಕೂಡ ಸಮಸ್ಯೆ ಆಗಬಹುದು. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಇಂದು ಕಳಸ ಬಂದ್‌ಗೆ ತಾಲ್ಲೂಕಿನ ಎಲ್ಲ ಬೆಳೆಗಾರರು, ಕಾರ್ಮಿಕರು, ವ್ಯಾಪಾರಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಕಳಸ ಬಾಳೂರು ಹೋಬಳಿ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಆರ್.ಭಾಸ್ಕರ್, 'ಮಲೆನಾಡಿನ ರೈತರು ಜೀವನ ನಿರ್ವಹಣೆಗಾಗಿ ಕಂದಾಯ ಜಮೀನಿನಲ್ಲಿ ಸಾಗುವಳಿ ಮಾಡಿದ್ದಾರೆಯೇ ಹೊರತು ಇದು ಭೂಕಬಳಿಕೆ ಅಲ್ಲ' ಎಂದು ಆಕ್ರೋಶಗೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+