ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಡಿಗೆರೆ: ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್‌ ನೀಡಬೇಡಿ: ಸಿ.ಟಿ.ರವಿ ಮನೆ ಮುಂದೆ ಕಾರ್ಯಕರ್ತರ ಆಕ್ರೋಶ

ಚಿಕ್ಕಮಗಳೂರಿನಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು.

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಮೂಡಿಗೆರೆ, ಮಾರ್ಚ್‌, 22: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಈ ಬಾರಿ ಹಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸ್ವಪಕ್ಷದವರ ವಿರುದ್ಧವೇ ತಿರುಗಿಬಿದ್ದಾರೆ. ಇದೇ ರೀತಿ ಬಿಜೆಪಿ ಕಾರ್ಯಕರ್ತರು ಮೂಡಿರೆಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್‌ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು.

Karnataka assembly election 2023: Mudigere: Dont give ticket to M.P.Kumaraswamy: BJP workers

ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್‌ ನೀಡಬೇಡಿ

ಕಳೆದ ವಾರ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಟ್ಟು ಹೊಸಮುಖಗಳಿಗೆ ಟಿಕೆಟ್‌ ಕೊಡಿ ಎಂದು ನೂರಾರು ಕಾರ್ಯಕರ್ತರು ಮೂಡಿಗೆರೆಯ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ್ದರು.

ತಮ್ಮ ಕಾರ್ಯಕರ್ತರು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ ಕಾರಣ ಬಿ.ಎಸ್. ಯಡಿಯೂರಪ್ಪ ಕೋಪಗೊಂಡು ರೋಡ್ ಶೋ ರದ್ದು ಮಾಡಿ ಹೆಲಿಪ್ಯಾಡ್‌ನತ್ತ ತೆರಳಿದ್ದರು. ಈ ವೇಳೆ ಸಿ.ಟಿ. ರವಿ ಮಾತನಾಡಿ, ಪಕ್ಷದ ಮರ್ಯಾದೆ ಕಳೆಯುತ್ತಿದ್ದೀರಾ? ನೀವು ಮೊದಲೇ ಮಾತನಾಡಿಕೊಳ್ಳಬೇಕಿತ್ತು ಎಂದು ಹೇಳುವ ಮೂಲಕ ರಾಷ್ಟ್ರಿಯ ಹೆದ್ದಾರಿಯಲ್ಲಿ ತಮ್ಮ ಕಾರ್ಯಕರ್ತರಿಗೆ ಕ್ಲಾಸ್‌ ತೆಗೆದುಕೊಂಡಿದ್ದರು.

Karnataka assembly election 2023: Mudigere: Dont give ticket to M.P.Kumaraswamy: BJP workers

ನಮಗೆ ಕುಮಾರಸ್ವಾಮಿ ಬೇಡವೇ ಬೇಡ

ನಂತರವೂ ಕೂಡ ಕಾರ್ಯಕರ್ತರು ನಮಗೆ ಕುಮಾರಸ್ವಾಮಿ ಬೇಡವೇ ಬೇಡ ಎಂದು ಹೇಳುವ ಮೂಲಕ ಬಿ.ಎಸ್.ವೈ. ಬರುವ ಮಾರ್ಗದಲ್ಲಿ ರಸ್ತೆ ಅಡ್ಡಗಟ್ಟಿ ಕೂಗಾಟ ನಡೆಸಿದ್ದರು. ಹೆದ್ದಾರಿಯಲ್ಲಿ 1000ಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸಿದ್ದು, ಹೊಸ ಮುಖಕ್ಕೆ ಟಿಕೆಟ್ ಕೊಡಿ ಎಂದು ಪಟ್ಟುಹಿಡಿದಿದ್ದರು. ಈ ವೇಳೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಪೊಲೀಸರು ಬೇರೆಡೆಗೆ ಕರೆದೊಯ್ದಿದ್ದರು.

ಇನ್ನು ಲಿಂಗಾಯತರ ಮತ ಬೇಡ ಎನ್ನುವ ಹೇಳಿಕೆ ಸಾಮಾಜಿಕ ಜಾಲತಾಣಲ್ಲಿ ವೈರಲ್ ಆಗಿತ್ತು. ಇದನ್ನು ಸಿ.ಟಿ.ರವಿ ಹೇಳಿದ್ದಾರೆ ಎಂದು ವೈರಲ್‌ ಆಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ‌ ಸಿಎಂ ಬಿ.ಎಸ್.ವೈ. ಆ ರೀತಿ ಯಾರೂ ಹೇಳಿಕೆ ಕೊಡಬಾರದು, ಅದು ತಪ್ಪು. ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಹೇಳಿದ್ದರು.

ವಸತಿ ಸಚಿವ ವಿ.ಸೋಮಣ್ಣ ಮುನಿಸಿಗೆ ಹೈಕಮಾಂಡ್ ಮುಲಾಮು, ಇಲ್ಲಿದೆ ವರದಿವಸತಿ ಸಚಿವ ವಿ.ಸೋಮಣ್ಣ ಮುನಿಸಿಗೆ ಹೈಕಮಾಂಡ್ ಮುಲಾಮು, ಇಲ್ಲಿದೆ ವರದಿ

ಚಾಮರಾಜನಗರದಲ್ಲೂ ಭಿನ್ನಮತ ಸ್ಫೋಟ

ಇದೇ ರೀತಿ ಇತ್ತೀಚೆಗಷ್ಟೇ ಉಸ್ತುವಾರಿ ವಿಚಾರವಾಗಿ ವಿ.ಸೋಮಣ್ಣ ವಿರುದ್ಧ ಚಾಮರಾಜನಗರ ಕ್ಷೇತ್ರದಲ್ಲಿ ಸ್ವಪಕ್ಷಿಯರೇ ಕೆಂಡಕಾರುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ಸಚಿವ ವಿ. ಸೋಮಣ್ಣಗೆ ಕೊಟ್ಟಿರುವುದಕ್ಕೇ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಒಂದು ವೇಳೆ ಟಿಕೆಟ್‌ ನೀಡಿದ್ರೆ "ಗೋ ಬ್ಯಾಕ್ ಸೋಮಣ್ಣ" ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದರು.

ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ಮಾಡಲಾಗುವುದು. ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿರುವುದು ಬಿಜೆಪಿ ಪಾಳೇಯದಲ್ಲಿ ಭಿನ್ನಮತ ಸ್ಫೋಟವಾದಂತಾಗಿತ್ತು.

ಸೋಮಣ್ಣ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಆದ ಬಳಿಕ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲೂ ಕೆಲಸ ಮಾಡಿಲ್ಲ. 2018ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದರು. ಅವರಿಂದ ಪಕ್ಷಕ್ಕೆ ಯಾವುದೇ ಅನುಕೂಲವಾಗಿಲ್ಲ. ಇದನ್ನೆಲ್ಲ ಗಮನಿಸಿ ಅವರಿಗೆ ಚುನಾವಣಾ ಉಸ್ತುವಾರಿ ಕೊಡಬಾರದು ಎಂದು ಆಗ್ರಹಿಸಿದರು.

ಒಟ್ಟಿನಲ್ಲಿ ಚಾಮರಾಜನಗರದಲ್ಲಿ ವಿ. ಸೋಮಣ್ಣ, ಇನ್ನು ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ವಿರುದ್ಧವೂ ಕಾರ್ಯರ್ತರು ಕೆಂಡಕಾರುತ್ತಿದ್ದಾರೆ. ಇದನ್ನೆಲ್ಲ ಗಮನಿಸಿದರೆ ಈ ಎರಡು ಕ್ಷೇತ್ರಗಳಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲಿ ಎಂಬಂತೆ ಕಾಣುತ್ತಿದೆ.

English summary
Karnataka assembly election 2023: Mudigere: Don't give ticket to M.P.Kumaraswamy: BJP workers outrage
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X