Mudigere Constituency: ಕಾಂಗ್ರೆಸ್, ಬಿಜೆಪಿ ಒಳ ಬೇಗುದಿ ಜೆಡಿಎಸ್‌ನ ಬಿ.ಬಿ ನಿಂಗಯ್ಯಗೆ ವರವಾಗುವುದೇ?
ಚಿಕ್ಕಮಗಳೂರು, ಮಾರ್ಚ್ 21: ಮೂಡಿಗೆರೆ ಎಂದ ತಕ್ಷ ನೆನಪಿಗೆ ಬರುವುದು ಸುಂದ ಪ್ರಕೃತಿ ಸೌಂದರ್ಯ. ಮೀಸಲು ಕ್ಷೇತ್ರವಾದ ಮೂಡಿಗೆರೆಯಲ್ಲಿ ವೈವಿಧ್ಯಮಯ ಜಾತಿ, ಮತ, ಪಂಥಗಳು ಬೆರೆತಿವೆ. ರಾಜ್ಯದಲ್ಲಿ ಯಾವ ಸರ್ಕಾರ ಬಂದರೂ, ಮೂಡಿಗೆರೆ ಕ್ಷೇತ್ರದಲ್ಲಿ ಯಾವ ಪಕ್ಷ ಆಡಳಿತಕ್ಕೆ ಸರಿಯಾದ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಕೊರಗಿದೆ. ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಯ ಒಳ ಬೇಗುದಿ ಹೊರ ಬಂದು ಚುನಾವಣ ಕಣ ಮತ್ತಷ್ಟು ರಂಗು ಪಡೆದುಕೊಂಡಿದೆ.
2018 ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಎಂ.ಪಿ.ಕುಮಾರಸ್ವಾಮಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮೋಟಮ್ಮ ಅವರನ್ನು 12,512 ಮತಗಳ ಅಂತರದಿಂದ ಸೋಲಿಸುವ ಮೂಲಕ ಮೂಡಿಗೆರೆ ಸ್ಥಾನವನ್ನು ಗೆದ್ದಿದ್ದಾರೆ. ಜೆಡಿಎಸ್ ನ ಬಿ.ಬಿ ನಿಂಗಯ್ಯ ಅವರು 22,063 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಜೆಡಿಎಸ್‌ನಿಂದ ಮತ್ತೆ ಟಿಕೆಟ್ ಪಡೆದಿದ್ದಾರೆ. ಈ ಬಾರಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣ ಪಂಚಾಯತ್ ಮತ್ತು ತಾಲ್ಲೂಕು. ಇದು ಜಿಲ್ಲಾ ಕೇಂದ್ರದಿಂದ 30 ಕಿ.ಮೀ ದೂರದಲ್ಲಿದೆ. ಮೂಡಿಗೆರೆ ಕಾಫಿ ಮತ್ತು ಕರಿಮೆಣಸು ಉತ್ಪಾದನೆಗೆ ಹೆಸರುವಾಸಿಯಾಗಿದೆ. ಮಡಿಕೇರಿ, ಸೋಮವಾರಪೇಟೆ ಮತ್ತು ಚಿಕ್ಕಮಗಳೂರು ನಂತರ ಮೂಡಿಗೆರೆ ಕರ್ನಾಟಕದ 4 ನೇ ಅತಿ ಎತ್ತರದ ಆಡಳಿತ ಪಟ್ಟಣವಾಗಿ ಹೆಸರುವಾಸಿಯಾಗಿದೆ.
ಮೂಡಿಗೆರೆಯಿಂದ ದಕ್ಷಿಣಕ್ಕೆ 25 ಕಿಮೀ ದೂರದಲ್ಲಿರುವ ಮೇಕನಗದ್ದೆ ಬಳಿಯ ಬೆಟ್ಟದ ಬೈರವೇಶ್ವರ ಮತ್ತು ಬೈರಾಪುರ (ಹೊಸಕೆರೆ) ಬಳಿಯ ನಾನ್ಯದ ಬೈರವೇಶ್ವರ ದೇವಸ್ಥಾನಗ, ಗುತ್ತಿ ಬಳಿಯ ದೇವರಮನೆ ಮೂಡಿಗೆರೆಯ ಜನಪ್ರಿಯ ಪ್ರವಾಸಿ ತಾಣಗಳಾಗಿವೆ. ಬಲ್ಲಾಳರಾಯನ ದುರ್ಗ ಅಥವಾ ಸುಂಕಸಾಲೆ ಗ್ರಾಮದ ದುರ್ಗದ ಬೆಟ್ಟ ಮತ್ತೊಂದು ಟ್ರೆಕ್ಕಿಂಗ್ ಮತ್ತು ಪ್ರವಾಸಿ ಆಕರ್ಷಣೆಯಾಗಿದೆ. ಕಾಫಿ ತೋಟಗಳು ಮತ್ತು ಹಸಿರು ಬೆಟ್ಟಗಳ ಸುಂದರ ಊರಿನಲ್ಲಿ ಈ ಬಾರಿ ಅಧಿಕಾರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿಯಿದೆ.

2011 ರ ಭಾರತದ ಜನಗಣತಿಯ ಪ್ರಕಾರ, ಮೂಡಿಗೆರೆ ಅಸೆಂಬ್ಲಿಯಲ್ಲಿ ಪರಿಶಿಷ್ಟ ಜಾತಿ ಮತದಾರರು ಸರಿಸುಮಾರು 48,303 ಇದ್ದು, ಎಸ್‌ಟಿ ಮತದಾರರು ಸರಿಸುಮಾರು 14,582 ಆಗಿದೆ. ಮುಸ್ಲಿಂ ಮತದಾರರು ಸರಿಸುಮಾರು 15,527 ರಷ್ಟಿದ್ದು, ಮತದಾರರ ಪಟ್ಟಿ ವಿಶ್ಲೇಷಣೆಯ ಪ್ರಕಾರ ಸುಮಾರು 9.2% ಇದ್ದಾರೆ. ಗ್ರಾಮೀಣ ಮತದಾರರು ಸರಿಸುಮಾರು 1,59,137 ಇದ್ದು, ನಗರ ಮತದಾರರು ಸರಿಸುಮಾರು 9,637 ಆಗಿದ್ದಾರೆ.
2013 ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ನ ಬಿ.ಬಿ ನಿಂಗಯ್ಯ ಅವರು 32,417 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ಸಿನ ಬಿ.ಎನ್ ಚಂದ್ರಪ್ಪ ಅವರು 31,782 ಮತಗಳಿಸಿದರು. 2004, 2008ರಲ್ಲಿ ಗೆದ್ದ ಬಿಜೆಪಿಯ ಎಂ.ಪಿ ಕುಮಾರಸ್ವಾಮಿ ಅವರು ಕೌಟುಂಬಿಕ ಕಲಹವು ಮಾಧ್ಯಮಗಳಲ್ಲಿ ಭಾರೀ ಪ್ರಚಾರ ಸಿಕ್ಕು, ಹ್ಯಾಟ್ರಿಕ್ ಗೆಲುವು ದಾಖಲಿಸುವುದನ್ನು ತಪ್ಪಿಸಿಕೊಂಡಿದ್ದರು. ಬಳಿಕ 2018 ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೋಟಮ್ಮ ಅವರನ್ನು 12,512 ಮತಗಳ ಅಂತರದಿಂದ ಸೋಲಿಸುವ ಮೂಲಕ ಮೂಡಿಗೆರೆ ಸ್ಥಾನವನ್ನು ಗೆದ್ದಿದ್ದಾರೆ.

ಈ ಬಾರಿ ಬಿಜೆಪಿಯಿಂದ ಎಂ.ಪಿ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರೆ ಎಂಬುದರ ಬೆನ್ನಲ್ಲೇ ಬಿಜೆಪಿಯಲ್ಲಿ ತೀವ್ರ ಗಲಾಟೆ ನಡೆಯುತ್ತಿದೆ. ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಟ್ಟು ಹೊಸಮುಖಗಳಿಗೆ ಟಿಕೆಟ್ ನೀಡಬೇಕು ಎಂದು ಸಾವಿರಾರು ಕಾರ್ಯಕರ್ತರು ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿತ್ತು. ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ವಿಜಯ ಸಂಕಲ್ಪ ಯಾತ್ರೆ, ರೋಡ್ ಶೋ ಅರ್ಧಕ್ಕೆ ರದ್ದುಗೊಳಿಸಿ ವಾಪಸ್ ತೆರಳಿ, ಘಟನೆಗೆ ಕಿಡಿಕಾರಿದ್ದರು.
ಇನ್ನು, ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಹಂಚಿಕೆ ಬಗ್ಗೆ ಭಾರೀ ಗೊಂದಲ ಉಂಟಾಗಿದೆ. ಕ್ಷೇತ್ರದಲ್ಲಿ ಐದು ಬಾರಿ ಸೋತಿರುವ ಮೋಟಮ್ಮ ಅವರೇ ಈಗಲೂ ಪಕ್ಷದ ಹಿರಿಯ ನಾಯಕಿಯಾಗಿದ್ದಾರೆ. ಈಗ ಅವರ ಮಗಳು ನಯನಾ ಮೋಟಮ್ಮ ಅವರಿಗೆ ಟಿಕೆಟ್ ನೀಡುವ ವದಂತಿ ಬೆನ್ನಲ್ಲೇ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎನ್.ಆರ್.ನಾಗರತ್ನಾ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರು, ಮೋಟಮ್ಮ ಅವರ ವರ್ತನೆಯಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಹೀಗಾಗಿ ಕಾಂಗ್ರೆಸ್‌ನಲ್ಲಿಯೂ ಬೇಗುದಿ ಹೆಚ್ಚಾಗಿದೆ. ಕಳೆದ 15 ವರ್ಷಗಳಿಂದ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಸ್ವಾಭಿಮಾನಕ್ಕೆ ಧಕ್ಕೆಯಾಗಿ ಪಕ್ಷ ತೊರೆದಿದ್ದೇನೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್.ಆರ್.ನಾಗರತ್ನಾ ತಿಳಿಸಿದ್ದಾರೆ. ನಯನ ಮೋಟಮ್ಮ ಅವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿ ಎಂದು ಕಾರ್ಯಕರ್ತರು ಹೇಳಿದರು ಇದಕ್ಕೆ ನಾಯಕರು ಒಪ್ಪುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.
ಜೆಡಿಎಸ್ ನಾಯಕ, ಮಾಜಿ ಶಾಸಕ ಬಿ.ಬಿ ನಿಂಗಯ್ಯಗೆ ಈಗಾಗಲೇ ಎಚ್,ಡಿ ಕುಮಾರಸ್ವಾಮಿ ಟಿಕೆಟ್ ಘೋಷಿಸಿದ್ದಾರೆ. ಆದರೆ, ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಅಸಮಾಧಾನ ಹೊರಹಾಕಿದ್ದಾರೆ. ಬಿ.ಬಿ.ನಿಂಗಯ್ಯ ಬದಲಿಸಿ ಜೆಡಿಎಸ್ ಉಳಿಸಿ ಅಭಿಯಾನ ಆರಂಭಿಸಿರುವ ಮೂಡಿಗೆರೆ ಕಾರ್ಯಕರ್ತರು, ಟಿಕೆಟ್ ಘೋಷಣೆಯಾದ್ರು ಕ್ಷೇತ್ರದಲ್ಲಿ ಪ್ರಚಾರದಲ್ಲಿ ಬಿ.ಬಿ.ನಿಂಗಯ್ಯ ತೊಡಗಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಪಂಚರತ್ನಯಾತ್ರೆ ವೇಳೆ ಕೂಡ ಮಾಜಿ ಶಾಸಕ ನಿಂಗಯ್ಯ ವಿರುದ್ಧ ಕಾರ್ಯಕರ್ತರು ಆರೋಪಗಳನ್ನು ಮಾಡಿದ್ದರು. ಬಿ.ಬಿ.ನಿಂಗಯ್ಯ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ಟಿಕೆಟ್ ಘೋಷಣೆ ಮಾಡಿದ ಬಳಿಕವೂ ಬದಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆ, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷಗಳಲ್ಲಿಯೂ ಭಿನ್ನಾಭಿಪ್ರಾಯಗಳು ಹೆಚ್ಚಾಗಿದೆ. ಟಿಕೆಟ್ ಘೊಷಣೆಯಾಗಿರುವ ಜೆಡಿಎಸ್ ಕಥ ಒಂದಾದರೆ, ಟಿಕೆಟ್ ಘೋಷಣೆ ಮಾಡದಿದ್ದರೂ ಟಿಕೆಟ್ ಆಕಾಂಕ್ಷಿಗಳು ಮತ್ತು ಪಕ್ಷದ ಕಾರ್ಯಕರ್ತರ ವರ್ತನೆ ಬೇರೆಯಿದೆ. ಇನ್ನೇನು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಿದ್ದು ಅದರಿಂದಲಾದರೂ ಕಾರ್ಯಕರ್ತರು ಸುಮ್ಮನಾಗುತ್ತಾರಾ ಕಾದು ನೋಡಬೇಕಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications