ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಫಿನಾಡು ಚಿಕ್ಕಮಗಳೂರಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಉತ್ತಮ ಬೆಂಬಲ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 7: ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಸಿಬ್ಬಂದಿಗಳು ಕರೆ ನೀಡಿರುವ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಬುಧವಾರ ಮುಂಜಾನೆಯಿಂದಲೇ ನೌಕರರು ಬಸ್ ಸಂಚಾರ ನಡೆಸದೆ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾವುದೇ ಕೆಎಸ್ಆರ್ಟಿಸಿ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಪ್ರಯಾಣಿಕರಿಗೆ ಸರ್ಕಾರಿ ಬಸ್ ಮುಷ್ಕರದ ಬಿಸಿಶಿವಮೊಗ್ಗದಲ್ಲಿ ಪ್ರಯಾಣಿಕರಿಗೆ ಸರ್ಕಾರಿ ಬಸ್ ಮುಷ್ಕರದ ಬಿಸಿ

ಮುಂಜಾನೆಯೇ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಬಸ್ ಇಲ್ಲದಿರುವುದರಿಂದ ಕೆಲ ಕಾಲ ಬಸ್ ನಿಲ್ದಾಣದಲ್ಲಿ ಕೂತು ನಂತರ ಖಾಸಗಿ ಬಸ್ ನಲ್ಲಿ ಪ್ರಯಾಣ ಬೆಳೆಸಿದರು.

Karnataka Bus Strike: Good Support For KSRTC Employees Strike In Chikkamagaluru

ರಸ್ತೆಗಿಳಿದ ಖಾಸಗಿ ಬಸ್

ಕೆಎಸ್ಆರ್ಟಿಸಿ ನೌಕರರು ಮುಷ್ಕರಕ್ಕೆ ಮುಂದಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 150ಕ್ಕೂ ಖಾಸಗಿ ಬಸ್ಸುಗಳನ್ನು ರಸ್ತೆಗಿಳಿಸಲಾಗಿತ್ತು. ಬಸ್ ನಿಲ್ದಾಣದಲ್ಲಿಯೇ ಅಧಿಕಾರಿಗಳು ಬೀಡು ಬಿಟ್ಟು, ಖಾಸಗಿ ಬಸ್ ಗಳ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರೂ ಸಹ ಎಂದಿನಂತೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಂಡು ಬರಲಿಲ್ಲ.

ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದ ಖಾಸಗಿ ಬಸ್

Recommended Video

ಎರಡನೇ ಬಾರಿ Bus Strike ಮಾಡಿದರು ಕ್ಯಾರೆ ಅನ್ನೋರಿಲ್ಲಾ!! | Oneindia Kannada

ಕೆಎಸ್ಆರ್ಟಿಸಿ ಸಿಬ್ಬಂದಿಗಳು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಸರ್ಕಾರಿ ಬಸ್ ಗಳು ಬಸ್ ನಿಲ್ದಾಣಕ್ಕೆ ಬರದಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳು ಸರ್ಕಾರಿ ಬಸ್ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿದ್ದವು. ಜಿಲ್ಲೆಯ ತರೀಕೆರೆ, ಕಡೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ತಾಲ್ಲೂಕುಗಳಲ್ಲಿಯೂ ಸಹ ಖಾಸಗಿ ಬಸ್ಸುಗಳನ್ನು ನಿಯೋಜನೆ ಮಾಡಲಾಗಿತ್ತು.

English summary
The strike called by KSRTC Employees for many demands has been good response in Chikkamagaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X