H.D.Deve Gowda: ಶೃಂಗೇರಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪರ ದೇವೇಗೌರಿಂದ ಮತಬೇಟೆ

ಚಿಕ್ಕಮಗಳೂರು, ಮೇ, 05: ರಾಜ್ಯ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದ್ದು, ರಾಜ್ಯ ನಾಯಕರ ಪರ ರಾಷ್ಟ್ರೀಯ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅದೇ ರೀತಿ ಜೆಡಿಎಸ್‌ ಸ್ಥಳೀಯ ಪಕ್ಷವಾದರೂ ರಾಷ್ಟ್ರೀಯ ನಾಯಕರ ಹಾದಿಯಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್‌ ಅಭ್ಯರ್ಥಿಗಳ ಪರ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತಬೇಟೆ ಮುಂದುವರೆಸಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಜೆಡಿಎಸ್‌ ಅಭ್ಯರ್ಥಿ ಸುಧಾಕರ್ ಶೆಟ್ಟಿ ಪರ ಮತಯಾಚನೆ ನಡೆಸಿದರು. ಶೃಂಗೇರಿ ಪಟ್ಟಣದ ಗೌರಿಶಂಕರ ಸಮುದಾಯದ ಭವನದಲ್ಲಿ ಕಾರ್ಯಕತರ ಸಮಾವೇಶದಲ್ಲಿ ಭಾಗಿಯಾಗಿ ಕೆಲವೊಂದು ಸೂಚನೆಯನ್ನು ನೀಡಿದ್ದಾರೆ. ಹಾಗೆಯೆ ಎಚ್.ಡಿ.ದೇವೇಗೌಡರು ಶೃಂಗೇರಿ, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತಬೇಟೆ ನಡೆಸಿ ಗಮನ ಸೆಳೆದರು.

Karnataka election 2023: H.D.Deve Gowda campaign for JDS candidate in Sringeri

ಪ್ರೀತಂ ಗೌಡಗೆ ಭವಾನಿ ರೇವಣ್ಣ ಕ್ಲಾಸ್‌

ಅದೇ ರೀತಿ ಹೈವೋಲ್ಟೇಜ್‌ ಕ್ಷೇತ್ರವಾದ ಹಾನಸದಲ್ಲಿ ಕರವೇ ವತಿಯಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಭವಾನಿ ರೇವಣ್ಣ ಪ್ರೀತಂ ಗೌಡ ವಿರುದ್ಧ ಇತ್ತೀಚೆಗಷ್ಟೇ ವಾಗ್ದಾಳಿ ನಡೆಸಿದ್ದರು.

ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ನಾವು ಯಾವಾಗಲೂ ಗೂಂಡಾಗಿರಿ ರಾಜಕಾರಣ ಮಾಡಿದವರಲ್ಲ. ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು, ನಿಮ್ಮನ್ನು ಮತ ಕೇಳುತ್ತೇವೆಯೇ ಹೊರತು, ಬಿಹಾರ್ ಅಂತಹ ರಾಜಕಾರಣವನ್ನು ನಾವು ಮಾಡುವುದಿಲ್ಲ ಎಂದು ಪರೋಕ್ಷವಾಗಿ ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯಯ್ದಿದ್ದರು.

ಅಲ್ಲದೆ ನೀವೆಲ್ಲ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡುತ್ತೇನೆ ಅಂತಾ ಹೇಳಿದ್ದೀರ. ಒಬ್ಬೊಬ್ಬರು ನೂರು ವೋಟು ಹಾಕಿಸುವ ಶಕ್ತಿ ಇದೆ ಅಂದುಕೊಳ್ಳುತ್ತೇನೆ ಎಂದಿದ್ದರು.

ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಚಿರ‌ಋಣಿ ಆಗಿರುತ್ತೇವೆ. ಅದೇ ರೀತಿ ನಮ್ಮ ಕುಟುಂಬ, ಪ್ರಕಾಶಣ್ಣನ ಕುಟುಂಬ ನಿಮ್ಮ ಜೊತೆಗೆ ಇರುತ್ತದೆ. ರಾಮ ಸೇತುವೆ ಕಟ್ಟುವಾಗ ಅಳಿಲು ಕೂಡ ಸೇವೆ ಮಾಡಿತ್ತು. ಅದರಿಂದ ಅಳಿಲು ಸೇವೆ ಅಂತಾ ಹೆಸರು ಬಂತು ಎಂದು ಮಾತನಾಡುತ್ತಾರೆ. ಮುಂದಿನ ದಿನಗಳಲ್ಲಿ ನೀವು ನಮ್ಮ ಜೊತೆ ಇರುತ್ತೀರ, ನಿಮ್ಮ ಜೊತೆ ನಾವು ಇರುತ್ತೇವೆ. ಯಾವುದೇ ಧಮ್ಕಿಗೆ ನೀವ್ಯಾರು ಹೆದರಬಾರದು. ಎಲ್ಲಾ ಸಮಯದಲ್ಲೂ ನಾವು ನಿಮ್ಮ ಜೊತೆಗಿರುತ್ತೇವೆಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+