Get Updates
Get notified of breaking news, exclusive insights, and must-see stories!

ಬಿಜೆಪಿ ಸ್ವತಂತ್ರ್ಯವಾಗಿ ಸ್ಫರ್ಧೆ ಮಾಡಲಿದೆ, ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು, ಮಾರ್ಚ್‌, 29: ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ. ಹೀಗಿರುವಾಗ ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಎಲ್ಲಿಂದ, ಹೊಂದಾಣಿಕೆಯೇ ಪ್ರಶ್ನೆಯೇ ಇಲ್ಲ. ಬಿಜೆಪಿ ಸ್ವತಂತ್ರ್ಯವಾಗಿ ಸ್ಫರ್ಧೆ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲೂ ನಾವು ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿ ಮಾಡಿಕೊಂಡಿದ್ದರೇ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೀಶ್ವರ್ ಸ್ಪರ್ಧೆ ಮಾಡುತ್ತಿರಲಿಲ್ಲ. ನನ್ನ ವಿರುದ್ಧ ಸ್ಫರ್ಧೆ ಮಾಡಿದ್ದ ಬಿ.ಎಚ್.ಹರೀಶ್ 32 ಸಾವಿರ ಮತಗಳನ್ನು ತಗೆದುಕೊಳ್ಳುತ್ತಿರಲಿಲ್ಲ ಎಂದರು.

Karnataka elections 2023: BJP will contest independently: CT Ravi

ಬಿಜೆಪಿ ಸ್ವತಂತ್ರ್ಯವಾಗಿ ಸ್ಫರ್ಧೆ ಮಾಡಲಿದೆ

ನಮಗೆ ಹೊಂದಾಣಿಕೆಯ ಅಗತ್ಯವಿಲ್ಲ. ಬಿಜೆಪಿ ಸ್ವತಂತ್ರ್ಯವಾಗಿ ಸ್ಫರ್ಧೆ ಮಾಡಲಿದೆ. ಇನ್ನು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾರು ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದನ್ನು ಪಾರ್ಲಿಮೆಂಟರಿ ಬೋರ್ಡ್ ತೀರ್ಮಾನ ಮಾಡುತ್ತದೆ. ನಾವು ಯಾರ ವಿರುದ್ಧವೂ ಇಲ್ಲ. ಬಿಜೆಪಿ ಪಕ್ಷದ ಪರ ಅಷ್ಟೇ ಎಂದರು.

ನಮ್ಮದು ವೈಚಾರಿಕ ರಾಜಕೀಯ ಪಕ್ಷವಾಗಿದೆ. ನಮ್ಮ ಪಕ್ಷದ ವಿಚಾರವನ್ನು ಬೆಳೆಸುವುದಷ್ಟೇ ನಮ್ಮ ಗುರಿಯಾಗಿದೆ. ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ ಎಂದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ನಂತರ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ ಕುರಿತು ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೇ. ಕಾನೂನು ಅದರ ಕೆಲಸ ಮಾಡುತ್ತದೆ. ತನಿಖೆ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ನಾವು ಕಾನೂನಿಗಿಂತ ಮಿಗಿಲು ಅಂತಾ ಕಾಂಗ್ರೆಸ್‍ನ ಒಂದು ಕುಟುಂಬ ಭಾವಿಸುತ್ತದೆ. ಸಂವಿಧಾನ, ಕಾನೂನಿಗಿಂತ ಮಿಗಿಲು ಹಾಗೂ ಎತ್ತರದಲ್ಲಿರುತ್ತೇವೆ ಎಂದು ಭಾವಿಸುತ್ತದೆ. ಆದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು, ಕಾನೂನು ಅದರ ಕೆಲಸ ಮಾಡುತ್ತದೆ ಎಂದರು.

Karnataka elections 2023: BJP will contest independently: CT Ravi

ಮುಸ್ಲಿಂಮರು ಮಾಡಿದ್ದೆಲ್ಲಾ ಸಹಿಸಿಕೊಂಡು ಬಿರಿಯಾನಿ ಹಾಕುವ ಭಾರತ ಅಲ್ಲ. ಬಾಲ ಉದ್ದ ಮಾಡಿದರೆ ಬಾಲ ಕಟ್ ಮಾಡುವುದು ಹೇಗೆಂದು ಈ ಸರ್ಕಾರಕ್ಕೆ ಗೊತ್ತು ಎಂದು ಎಸ್‍ಡಿಪಿಐ ಮುಖಂಡನ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದರು.

ನಮ್ಮ ಹಕ್ಕನ್ನು ವಾಪಾಸ್ ಕೊಡದಿದ್ದರೆ ಮುಖ್ಯಮಂತ್ರಿ ಚಡ್ಡಿ ಬಿಚ್ಚಿಸುತ್ತೇವೆ ಎಂದು ಎಸ್‍ಡಿಪಿಐ ಮುಖಂಡನ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದೇನು ಹೋಗುತ್ತೋ, ತಲೆ ತೆಗೀತಿಯೋ ನಿನ್ನ ತಾಕತ್ತು ತೋರಿಸು. ನಿಮ್ಮ ತಾಕತ್ತು ತೋರಿಸಿ ಆಮೇಲೆ ನಾವು ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ಇದು 1947ರ ಭಾರತವಲ್ಲ, ನೀವು ಮಾಡಿದ್ದೆಲ್ಲವನ್ನು ಸಹಿಸಿಕೊಂಡು ಬಿರಿಯಾನಿ ಹಾಕುವ ಭಾರತವು ಅಲ್ಲ, ನಿಮ್ಮ ಮೇಲಿನ ಪ್ರಕರಣಗಳನ್ನು ಹಿಂಪಡೆದು ಮೆರೆಯಲು ಅವಕಾಶ ನೀಡುವ ಸರ್ಕಾರವು ಈಗ ಇಲ್ಲ ಎಂದರು.

ಈಗಿರುವ ಸರ್ಕಾರಕ್ಕೆ ನೀವು ಬಾಲ ಉದ್ದ ಮಾಡಿದರೇ ಕಟ್ ಮಾಡುವುದು ಹೇಗೆಂದು ಗೊತ್ತಿರುವ ಸರ್ಕಾರ. ಬಾಂಬ್ ಹಾಕುವವರ ತಲೆ ಮೇಲೆ ಬಾಂಬ್ ಹಾಕುವ ಸರ್ಕಾರ. ಭಯೋತ್ಪಾದನೆ ಮಾಡುವವರಿಗೆ ಸರ್ಜಿಕಲ್ ಸ್ಟ್ರೈಕ್ ಮಾಡಿ ತಲೆ ಎತ್ತದಂತೆ ಮಾಡುವ ತಾಕತ್ತಿನ ಸರ್ಕಾರ ಎಂದು ತಿರುಗೇಟು ನೀಡಿದರು.

ಎಸ್‍ಡಿಪಿಐ ಹುಟ್ಟಿದ್ದೇ ಕೇರಳದಲ್ಲಿ
ಇನ್ನು ಎಸ್‍ಡಿಪಿಐ ಹುಟ್ಟಿದ್ದೇ ಕೇರಳದಲ್ಲಿ. ಅಲ್ಲಿಯೇ ಕೋಮು ಆಧಾರಿತ, ಮತ ಆಧಾರಿತ ಮೀಸಲಾತಿ ಇಲ್ಲ. ಆಂಧ್ರ ಪ್ರದೇಶದಲ್ಲಿ ನೀಡಲಾಗಿತ್ತು. 7 ಜನ ನ್ಯಾಯಾಧೀಶರು ಮೀಸಲಾತಿಯನ್ನು ರದ್ದು ಮಾಡಿದರು. ಕರ್ನಾಟಕದಲ್ಲಿ ಸಂವಿಧಾನ ಬಾಹಿರ ಮೀಸಲಾತಿಯನ್ನು ಯಾರಿಗೂ ಕೊಡುವುದಿಲ್ಲ ಎಂದರು.

ಸಂವಿಧಾನ ಬಾಹಿರವಾಗಿರುವರ ಸಮರ್ಥನೆಗೆ ಯಾರು ನಿಲ್ಲುತ್ತಾರೆಯೋ ಅವರು ನಿಲ್ಲಲಿ. ಧಮ್ಕಿ ಹಾಕುವ ತಾಲಿಬಾನ್ ಮಾದರಿ ಇಲ್ಲಿ ನಡೆಯುವುದಿಲ್ಲ. ಆ ಸರ್ಕಾರವು ಈಗ ಇಲ್ಲ. ತಾಲಿಬಾನ್ ಆಡಳಿತವಿರುವ ರಾಜ್ಯವೆಂದು ಭಾವಿಸಿದ್ದರೇ, ಇದು ತಾಲಿಬಾನ್ ಆಡಳಿತದ ರಾಜ್ಯ ಅಲ್ಲ ಎಂದರು.

ಮುಸ್ಲಿಮರು ಹಾಗೂ ಆ ಸಮುದಾಯದ ಎಲ್ಲಾ ಒಳ ಪಂಗಡಗಳನ್ನ ಪ್ರವರ್ಗ 2ಬಿಗೆ ಸೇರಿಸಲಾಗಿತ್ತು. ಈ ಪ್ರವರ್ಗಕ್ಕೆ ಶೇ. 4ರಷ್ಟು ಮೀಸಲಾತಿ ನೀಡಲಾಗಿತ್ತು. ಇದೀಗ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟ 2ಬಿ ಪ್ರವರ್ಗಕ್ಕೆ ಕೊಟ್ಟಿದ್ದ ಮೀಸಲಾತಿಯನ್ನೇ ರದ್ದು ಮಾಡಿದೆ.

ಆರ್ಥಿಕ ಹಿಂದುಳಿದ ವರ್ಗಕ್ಕೆ ನೀಡುವ ಶೇ. 10ರಷ್ಟು ಮೀಸಲಾತಿಗೆ ಮುಸ್ಲಿಂ ಸಮುದಾಯವನ್ನೂ ಸೇರ್ಪಡೆ ಮಾಡಲಾಗಿದೆ. ಮುಸ್ಲಿಂ ಸಮುದಾಯದ ಮೀಸಲಾತಿ ಪಾಲನ್ನ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ಸಮಾನವಾಗಿ ಹಂಚಿಕೆ ಮಾಡಲಾಗಿದೆ ಎಂದು ಮುಸ್ಲಿಂ ಸಮುದಾಯ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+