• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಸರ್ಕಾರ ಆದೇಶ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎರಡು ತಿಂಗಳ ಅಂತರದಲ್ಲಿ ಮೂವರನ್ನು ಕಾಡಾನೆಗಳ ದಾಳಿಯಿಂದ ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರೈತರಿಗೆ ತೊಂದರೆ ಕೊಡುತ್ತಿರುವ ಮೂರು ಆನೆಗಳನ್ನು ಸೆರೆ ಹಿಡಿಯಲು ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ರೈತರ ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿರುವುದಲ್ಲದೆ, ಹಾಗಿಂದಾಗೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಈಗಾಗಲೇ ಸೆಪ್ಟೆಂಬರ್ ತಿಂಗಳಿಂದ ಈಚೆಗೆ ಮೂವರನ್ನು ಕಾಡಾನೆಗಳು ಬಲಿ ತೆಗೆದುಕೊಂಡಿವೆ. ಇದರಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಸೆರೆಹಿಡಿಯುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲನ ಇಲಾಖೆ ಚಿಕ್ಕಮಗಳೂರು ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದೆ.

ಕಾಡಾನೆ ದಾಳಿಗೆ ಮೂಡಿಗೆರೆಯ ಹುಲ್ಲೆಮನೆಯಲ್ಲಿ ಮತ್ತೊಂದು ಬಲಿಕಾಡಾನೆ ದಾಳಿಗೆ ಮೂಡಿಗೆರೆಯ ಹುಲ್ಲೆಮನೆಯಲ್ಲಿ ಮತ್ತೊಂದು ಬಲಿ

ಭಾನುವಾರ ಹಸುಗಳಿಗೆ ಹುಲ್ಲು ಕೊಯ್ಯಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿತ್ತು. ಈ ಘಟನೆ ಬೆನ್ನಲ್ಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ಯಪಡಿಸಿದ್ದರು. ಇನ್ನೂ ತಡವಾಗಿ ಬಂದರೆಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವೇಳೆ ಮಾತಿನ ಚಕಮಕಿ ನಡೆದು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸ್ಥಳೀಯರು ನನ್ನ ಮೇಲೆ ಹಲ್ಲೆ ಮಾಡಿ, ಬಟ್ಟೆಯನ್ನು ಹರಿದಿದ್ದಾರೆ ಎಂದು ಶಾಸಕ ಕುಮಾರಸ್ವಾಮಿ ಆರೋಪಿಸಿದ್ದರು.

ಆನೆ ಸ್ಥಳಾಂತರಕ್ಕೆ ಸೂಚನೆ

ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದ ಆನಂದ್‌ ದೇವಾಡಿಗ ಹಾಗೂ ಹುಲ್ಲೆಮನೆ ಗ್ರಾಮದ ಶೋಭಾರನ್ನು ಕಾಡಾನೆಗಳು ದಾಳಿಗೆ ಮೃತಪಟ್ಟಿದ್ದಾರೆ. ಅಲ್ಲದೆ ಆನೆಗಳು ಜನರ ಆಸ್ತಿ ಪಾಸ್ತಿ, ಬೆಳೆಗಳನ್ನು ನಾಶಪಡಿಸುತ್ತಿವೆ. ಇದರಿಂದ ಸಾರ್ವಜನಿಕರು ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳ ಮೇಲೆ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೆ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿವೆ.

ಹಾಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿರುವ 3 ಕಾಡಾನೆಗಳನ್ನು ಗುರುತಿಸಿ, ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಅರಣ್ಯಾಧಿಕಾರಿಗಳು ಮನವಿ ಸಲ್ಲಿಸಿದ್ದು, ಇದಕ್ಕೆ ಸರಕಾರ ವನ್ಯಜೀವಿ ಕಾಯ್ದೆ 1972ರ ಸೆಕ್ಷನ್ 11ರ ಅನ್ವಯ ಅನುಮತಿ ನೀಡಿದೆ . ಮೂರು ಆನೆಗಳನ್ನು ಸೆರೆ ಹಿಡಿದು, ರಕ್ಷಿತಾ ಅರಣ್ಯ ಪ್ರದೇಶ ಅಥವಾ ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಅನುಮತಿ ನೀಡಿದೆ.

English summary
Karnataka government sent a cercular tof order to captured wild elephants, which is trpobles locals in mudigere,chikkamagaluru district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X