ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಲ್ ಟಿಕೆಟ್ ಸಿಕ್ಕಿಲ್ಲ: ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿಗಳ ಗೊಂದಲ

|
Google Oneindia Kannada News

ಚಿಕ್ಕಮಗಳೂರು, ಜೂನ್ 25: ಇಂದಿನಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿದೆ. ಚಿಕ್ಕಮಗಳೂರಿನಲ್ಲಿ ಹಾಲ್‌ ಟಿಕೆಟ್‌ ಸಿಕ್ಕಿಲ್ಲ ಎಂದು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ.

ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದ ಜ್ಯೂನಿಯರ್ ಕಾಲೇಜಿನಲ್ಲಿ ಶಾಲೆಯ ಮುಂದೆ ಹಾಲ್ ಟಿಕೆಟ್‌ಗಾಗಿ ವಿದ್ಯಾರ್ಥಿಗಳಲ್ಲಿ ಕಾಯುತ್ತಿದ್ದಾರೆ. ಪರೀಕ್ಷೆಯ ಒತ್ತಡದ ನಡುವೆ ಹಾಲ್ ಟಿಕೆಟ್ ಗೊಂದಲ ಉಂಟಾಗಿದೆ. ಕೆಲಕಾಲ ವಿದ್ಯಾರ್ಥಿಗಳಲ್ಲಿ ಇದು ಆತಂಕ ಮೂಡಿಸಿದೆ. ಹಾಲ್ ಟಿಕೆಟ್ ಕೊಡುವುದಾಗಿ ಶಿಕ್ಷಕರು ಭರವಸೆ ನೀಡಿದ್ದು, ಗೊಂದಲದಲ್ಲೇ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ತೆರಳಿದ್ದಾರೆ.

ತಮಿಳುನಾಡು, ಆಂಧ್ರದಲ್ಲಿಲ್ಲ, ಕರ್ನಾಟಕದಲ್ಲೇಕೆ SSLC ಪರೀಕ್ಷೆ?ತಮಿಳುನಾಡು, ಆಂಧ್ರದಲ್ಲಿಲ್ಲ, ಕರ್ನಾಟಕದಲ್ಲೇಕೆ SSLC ಪರೀಕ್ಷೆ?

ಕೊರೊನಾ ಪಾಸಿಟಿವ್ ಬಂದು ನಂತರ ನೆಗೆಟಿವ್ ವರದಿ ಬಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಜಿಲ್ಲೆಯ 7 ಸೀಲ್ ಡೌನ್ ಪ್ರದೇಶಗಳ ವಿದ್ಯಾರ್ಥಿಗಳಿಗೂ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

Karnataka SSLC Exam: Students Confusion Over Hall Tickets In Mudigere Junior College

ಜಿಲ್ಲೆಯಲ್ಲಿ 58 ಕೇಂದ್ರಗಳಲ್ಲಿ 13924 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಾದ್ಯಂತ 136 ರೂಟ್‌ಗಳನ್ನು ಮಾಡಲಾಗಿದ್ದು ಉಚಿತ ಸರ್ಕಾರಿ, ಖಾಸಗಿ ಬಸ್‌ಗಳನ್ನ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕೇಂದ್ರಗಳಲ್ಲೂ ಸ್ಯಾನಿಟೈಸರ್, ಮಾಸ್ಕ್ ಕೊಡಲಾಗುತ್ತಿದ್ದು, ದೈಹಿಕ ಅಂತರದ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಲಾಗುತ್ತಿದೆ.

English summary
Karnataka SSLC exam Day 1: Students Confusion over hall tickets in Mudigere Junior College.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X