Kolkata Rape Case: ಕೋಲ್ಕತ್ತಾ ಅತ್ಯಾಚಾರ ಪ್ರಕರಣ- ಚಿಕ್ಕಮಗಳೂರಿನಲ್ಲಿ 28 ಸಂಘಟನೆಗಳಿಂದ ಬೃಹತ್ ಪ್ರತಿಭಟನೆ!
ಚಿಕ್ಕಮಗಳೂರು ಆಗಸ್ಟ್ 24: ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಖಂಡಿಸಿ ಚಿಕ್ಕಮಗಳೂರು ನಗರದಲ್ಲಿಂದು 28 ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಹನುಮಂತಪ್ಪ ಸರ್ಕಲ್‌ನಿಂದ ಆಜಾದ್ ಪಾರ್ಕ್ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ಸಾಗಿದ್ದು, ಪ್ರತಿಭಟನೆಯಲ್ಲಿ 700ಕ್ಕೂ ಅಧಿಕ ಜನ ಕಪ್ಪು ಬಟ್ಟೆ ಧರಿಸಿರುವುದು ಕಂಡು ಬಂದಿದೆ.
ವೈದ್ಯರು, ವಿದ್ಯಾರ್ಥಿಗಳು, ಸರ್ವಪಕ್ಷಗಳು, ವಿವಿಧ ಸಂಘಟನೆಗಳಿಂದ ಈ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಅತ್ಯಾಚಾರ-ಕೊಲೆ ಖಂಡಿಸಿ ವಿದ್ಯಾರ್ಥಿಗಳು ನೃತ್ಯ ಮಾಡುವ ಮೂಲಕ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದರು. ಡಿಸಿ ಮೂಲಕ ಕೇಂದ್ರ ಸರ್ಕಾರಕ್ಕೆ ಸಂಘಟನೆಗಳ ಮನವಿ ನೀಡಲಾಯಿತು.

ಆಗಸ್ಟ್ 9ರಂದು ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಮರುದಿನ ಕೋಲ್ಕತ್ತಾ ಪೊಲೀಸರ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಗಿತ್ತು.
ಆಗಸ್ಟ್ 13 ರಂದು ಕೋಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು, ಆಗಸ್ಟ್ 14ರಂದು ಸಿಬಿಐ ತನಿಖೆ ಕೈಗೆತ್ತಿಕೊಂಡಿತು. ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರಕಾರದ ನಿರ್ಲಕ್ಷ್ಯ ಹಾಗೂ ಪೊಲೀಸರ ಕರ್ತವ್ಯಲೋಪ ಎದ್ದುಕಾಣುತ್ತಿದೆ.

ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರಕಾರದ ನಿರ್ಲಕ್ಷ್ಯ ಹಾಗೂ ಪೊಲೀಸರ ಕರ್ತವ್ಯಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಕೆಂಡಮಂಡಲವಾಗಿದೆ. ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು, ಎಫ್‌ಐಆರ್ ದಾಖಲಿಸಲು ವಿಳಂಬದಿಂದ ಹಿಡಿದು, ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ, ಸಾಕ್ಷ್ಯ ನಾಶಕ್ಕೆ ಕಟ್ಟಡ ರಿಪೇರಿ ಸೇರಿದಂತೆ ಎಲ್ಲಾ ಬೆಳವಣಿಗೆಗಳನ್ನೂ ಒಂದೊಂದಾಗಿ ಉಲ್ಲೇಖಿಸಿ ತರಾಟೆಗೆ ತೆಗೆದುಕೊಂಡಿತು. ಘಟನೆಯ ಪೂರ್ವಾಪರ ಮಾಹಿತಿ ನೀಡಲು ಕೋಲ್ಕತಾ ನಗರದ ಪೊಲೀಸ್ ಮುಖ್ಯಸ್ಥರನ್ನು ಮುಂದಿನ ವಿಚಾರಣೆ ವೇಳೆ ಕಟಾಕಟೆಗೆ ಕರೆಸಿ ಎಂದು ತಾಕೀತು ಮಾಡಿತು.
ಕಳೆದ 11 ದಿನಗಳಿಂದ ಹೋರಾಟ ನಡೆಸುತ್ತಿರುವ ವೈದ್ಯರಿಗೆ ಮುಷ್ಕರ ಕೈ ಬಿಡುವಂತೆ ನ್ಯಾಯಪೀಠ ಮನವಿ ಮಾಡಿತು. ಇದರ ಬೆನ್ನಲ್ಲೇ ಏಮ್ಸ್ ಆಸ್ಪತ್ರೆಗಳ ನಿವಾಸಿ ವೈದ್ಯರ ಸಂಘದ ಸೂಚನೆಯಂತೆ ಮುಷ್ಕರ ಅಂತ್ಯಗೊಳಿಸಿದ ವೈದ್ಯರು ಕರ್ತವ್ಯಕ್ಕೆ ಮರಳಿದರು. ಆದರೆ ಕೋಲ್ಕತಾದಲ್ಲಿ ವೈದ್ಯರ ಪ್ರತಿಭಟನೆ ಮುಂದುವರಿದಿದೆ.

ಕರ್ನಾಟಕದಾದ್ಯಂತ ಈ ಪ್ರಕರಣವನ್ನು ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ದಿನ ಮೈಸೂರಿನಲ್ಲಿ ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮೈಸೂರು ಸಶಸ್ತ್ರ ಪಡೆಗಳ ಮಾಜಿ ಸೈನಿಕ ಸಂಘದ ಸದಸ್ಯರು ಮೋಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಯುದ್ಧ ಸ್ಮಾರಕ ಉದ್ಯಾನದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications