ಕೊಟ್ಟಿಗೆಹಾರ: ಸದಾ ಪ್ರವಾಸಿಗರಿಂದ ಗಿಜಿಗುಡುವ ಈ ಸ್ಥಳದಲ್ಲಿ ತೇಜಸ್ವಿ ಕೃತಿಗಳ ಓದಿನ ಸದ್ದು
ಕೊಟ್ಟಿಗೆಹಾರ, ಜನವರಿ, 29: ಸದಾ ಪ್ರವಾಸಿಗರಿಂದ ಗಿಜಿಗುಡುವ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಪರಿಸರ ಸಂರಕ್ಷಣೆಯ ಕುರಿತ ತೇಜಸ್ವಿ ಅವರ ಕೃತಿಗಳ ಓದಿನ ಸದ್ದು ಎಲ್ಲೆಡೆ ಮನೆ ಮಾಡಿದ್ದು, ಒಂದು ಕ್ಷಣ ತಮ್ಮನ್ನು ತಾವು ಮರೆತು ತೇಜಸ್ವಿ ಕೃತಿಗಳ ಓದಿನ ಸದ್ದನ್ನು ಕೇಳುತ್ತಿರುವವರ ಈ ದೃಶ್ಯಗಳು ಗಮನ ಸೆಳೆದಿವೆ.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಆಯೋಜಿಸಿದ್ದ ಕಾಡಿನಲ್ಲಿ ಓದು ನಡಿಗೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಚಾರಣಿಗರು ಪಾಲ್ಗೊಂಡಿದ್ದರು. ಅಲ್ಲದೆ ಇಲ್ಲಿ ನೆರೆದಿದ್ದವರು ಸುತ್ತ ಕಣ್ಣು ಆಯಿಸಿದಷ್ಟು ದೂರವೂ ಹಬ್ಬಿರುವ ಹಸಿರು ಅರಣ್ಯದ ನಡುವೆ ಒಂದೆಡೆ ಸೇರಿ ತೇಜಸ್ವಿ ಕೃತಿಗಳ ಕೆಲ ಸಾಲುಗಳನ್ನು ಓದಿದರು.

ಕೀಟತಜ್ಞರಾದ ಮೂಡಿಗೆರೆಯ ಅವಿನಾಶ್ ಮಾತನಾಡಿ, ಪರಿಸರದ ಬಗ್ಗೆ ಬೆರಗು ಮತ್ತು ಪರಿಸರದ ಉಳಿವಿನ ಮಹತ್ವವನ್ನು ತೇಜಸ್ವಿ ಅವರು ತಮ್ಮ ಬಹುತೇಕ ಕೃತಿಗಳಲ್ಲಿ ಪ್ರತಿಪಾದಿಸಿದ್ದಾರೆ. ತೇಜಸ್ವಿ ಕೃತಿಗಳಿಂದಾಗಿ ಹೊಸದೊಂದು ಓದುಗ ವರ್ಗ ಸೃಷ್ಠಿಯಾಗಿ ಓದಿನ ರುಚಿ ಎಲ್ಲರಲ್ಲೂ ಮೂಡುತ್ತಿದೆ. ಪರಿಸರ, ಜೀವಸಂಕುಲ, ಬಾಹ್ಯಾಕಾಶ, ಮುಂತಾದ ವಿಷಯಗಳ ಬಗ್ಗೆ ತೇಜಸ್ವಿ ಅವರು ತಮ್ಮ ಕೃತಿಗಳಲ್ಲಿ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದರು.
ಮಂಡ್ಯದ ಅಂಶು ಅವರು ಪರಿಸರದ ಕಥೆ, ಚಿಕ್ಕಮಗಳೂರಿನ ಕಾರ್ತಿಕ್ ಎಂ.ಕೆ.ಹುಲಿಯೂರಿನ ಸರಹದ್ದು, ದೀಪಗೌಡ ಅವರು ಪಾಕಕ್ರಾಂತಿ, ತುಮಕೂರಿನ ಪಲ್ಲವಿ ರಂಗನಾಥ್ ಮಾಯಾಲೋಕ, ಚಿತ್ರದುರ್ಗದ ದಿನೇಶ್ ಕೆ.ಎಸ್ ಅವರು ಮಿಸ್ಸಿಂಗ್ ಲಿಂಕ್, ಬೆಂಗಳೂರಿನ ಪ್ರೇಮ ಅವರು ಹೆಜ್ಜೆ ಮೂಡದ ಹಾದಿ, ಬೆಂಗಳೂರಿನ ಸುನಿತಾ ಮತ್ತು ವಿನೋದ್ ಅವರು ವಿಸ್ಮಯ ವಿಶ್ವ, ಶಿರಾದ ಶ್ರೀನಾಥ್ ಅವರು ಪಾಕಕ್ರಾಂತಿ ಬಗ್ಗೆ ಚರ್ಚೆ ಮಾಡಿದರು.
ಇನ್ನು ಮೂಡಿಗೆರೆಯ ಅವಿನಾಶ್ ಅವರು ಪಾಕಕ್ರಾಂತಿ, ನಂದೀಶ್ ಬಂಕೇನಹಳ್ಳಿ ಅವರು ಕರ್ವಾಲೊ, ಕೃತಿಯನ್ನು ಓದಿದರು. ಚಿಕ್ಕಮಗಳೂರಿನ ಸತ್ಯನಾರಾಯಣ, ಓಂಕಾರಪ್ಪ, ಹಾಸನದ ಬಾಲು ತೇಜಸ್ವಿ ಅವರ ಬದುಕು ಬರಹದ ಕುರಿತು ಚರ್ಚೆ ನಡೆಸಿದರು.
ಪರಿಸರದ ಸಂರಕ್ಷಣೆ, ತೇಜಸ್ವಿ ಅವರ ಬದುಕು, ಬರಹಗಳ ಬಗ್ಗೆ ವಿಚಾರ ವಿನಿಮಯ ನಡೆಯಿತು. ಕಾಡಿನಲ್ಲಿ ಓದು ಕಾರ್ಯಕ್ರಮಕ್ಕೂ ಮುನ್ನ ರಾಣಿಝರಿಯಿಂದ ಬಲ್ಲಾಳರಾಯನ ದುರ್ಗಕ್ಕೆ ಚಾರಣ ನಡೆಸಲಾಯಿತು. ಕೀಟತಜ್ಞರಾದ ಅವಿನಾಶ್ ಅವರು ಕೀಟಗಳ ಬಗ್ಗೆ ಮಾಹಿತಿ ನೀಡಿದರು. ಪ್ಲಾಸ್ಟಿಕ್ ಅನ್ನು ಎಲ್ಲಿಯೂ ಬಳಕೆ ಮಾಡದೇ ಪ್ಲಾಸ್ಟಿಕ್ ಮುಕ್ತ ಚಾರಣ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಕೀಟ ತಜ್ಞರಾದ ಅವಿನಾಶ್, ತೇಜಸ್ವಿ ಅವರ ಒಡನಾಡಿ ಹಾಗೂ ಕಲಾವಿದರಾದ ಬಾಪುದಿನೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಸಂಗೀತಾ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಭಿಲಾಷ್, ಚಂದನ್ ಸಿಬ್ಬಂದಿ ಭವಿತ್ ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40ಕ್ಕೂ ಹೆಚ್ಚು ಚಾರಣಿಗರು ಇದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications