ಚಿಕ್ಕಮಗಳೂರು ಹಬ್ಬದಲ್ಲಿ ಬೃಹತ್‌ ಕೃಷಿಮೇಳ, ವಸ್ತು ಪ್ರದರ್ಶನ: ಇಲ್ಲಿದೆ ಸಂಪೂರ್ಣ ಮಾಹಿತಿ

ಚಿಕ್ಕಮಗಳೂರು, ಜನವರಿ 11: 2023ರ ಜನವರಿ 18 ರಿಂದ 22 ರವರೆಗೆ ನಡೆಯಲಿರುವ ಚಿಕ್ಕಮಗಳೂರು ಹಬ್ಬದ ಪ್ರಯುಕ್ತ ಎ.ಐ.ಟಿ ಕಾಲೇಜಿನ ಆವರಣದಲ್ಲಿ ಬೃಹತ್ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಏರ್ಪಡಿಸಿರುವ ಸಂಬಂಧ ಕರೆಯಲಾಗಿದ್ದ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಕಲೆ, ಸಾಹಿತ್ಯ, ಸಂಸ್ಕೃತಿ, ಧಾರ್ಮಿಕ, ಪಾರಂಪರಿಕ, ನೈಸರ್ಗಿಕ ಸಂಪತ್ತುಗಳನ್ನು ಹೊರಹೊಮ್ಮಿಸುವ ಹಾಗೂ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಸಾಮಾಜಿಕ ಅರಣ್ಯ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ, ಸ್ವಚ್ಛತೆ ಮತ್ತು ನೈರ್ಮಲ್ಯ, ಕೈಗಾರಿಕೆ, ನೀರಾವರಿ, ಸಾಮಾಜಿಕ ಅಭಿವೃದ್ಧಿಗಳು, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಸಬಲೀಕರಣ ಕುರಿತು ನಾಡಿನ ಜನತೆಗೆ ಮಾದರಿಗಳ ಮೂಲಕ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಆಕರ್ಷಣೀಯ ವಸ್ತು ಪ್ರದರ್ಶನ ಮೂಲಕ ಜನತೆಗೆ ಜ್ಞಾನ ಒದಗಿಸುವ ಜ್ಞಾನ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸುಮಾರು 1.5 ಲಕ್ಷ ಚದುರ ಅಡಿಯ ವಿಸ್ತಿರ್ಣದಲ್ಲಿ ಜರ್ಮನ್ ಟೆಂಟ್ ನಿರ್ಮಿಸಿ ಅದರ ಅಡಿಯಲ್ಲಿ ಸುಮಾರು 300 ಕ್ಕೂ ಅಧಿಕ ಮಳಿಗೆಗಳನ್ನು ನಿರ್ಮಿಸಿ ಅತ್ಯಾಕರ್ಷಕ ಮಾದರಿಗಳನ್ನು ಪ್ರದರ್ಶಿಸಲು ಏರ್ಪಾಡು ಮಾಡಿ ಕೊಳ್ಳಲಾಗಿದ್ದು, 1.5 ಎಕರೆ ಜಾಗದಲ್ಲಿ ಫಲ ಪುಷ್ಪ ಪ್ರದರ್ಶನ, ಜಲಾನಯನ ಅಭಿವೃದ್ಧಿ, ಸಮಗ್ರ ಕೃಷಿ ಪದ್ಧತಿ ಪರಿಕಲ್ಪನೆಯ ಮಾದರಿಗಳು, ಮತ್ಸ್ಯ ಮೇಳ, ಚಿಟ್ಟೆ ಮತ್ತು ಕೀಟ ಪ್ರಪಂಚ, ನೇಕಾರರಿಗೆ ನೆಯ್ಗೆ, ಮಡಿಕೆ ಮಾಡುವವರಿಗೆ ಮಡಿಕೆ ಮಾಡುವುದು ಮುಂತಾದ ಮಾದರಿಗಳ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

Krishi Mela During Chikkamagaluru Habba Be Held Between January 18 to 22

ಇನ್ನು ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ತಮ್ಮ ಮಾದರಿಗಳ ಪ್ರದರ್ಶನಕ್ಕೆ ಬೇಕಾಗಿರುವ ಸ್ಥಳಾವಕಾಶ ಹಾಗೂ ಪ್ರಸ್ತುತ ಪಡಿಸುತ್ತಿರುವ ಮಾದರಿಗಳ ಮಾಹಿತಿಯನ್ನು ಚರ್ಚಿಸಿದರು. ನಂತರ ರಾಷ್ಟ್ರದ ಪ್ರತಿಷ್ಠಿತ ಸಂಸ್ಥೆಗಳು ವಸ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿಯಿಂದ ಹಾಗೂ ಪ್ರತಿ ಶಾಲೆಯಿಂದ ಸಾರ್ವಜನಿಕರನ್ನು ಹಾಗೂ ವಿದ್ಯಾರ್ಥಿಗಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಎಲ್ಲಾ ಇಲಾಖಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಕೃಷಿ ಮೇಳ ಮತ್ತು ವಸ್ತು ಪ್ರದರ್ಶನವನ್ನು ಯಶಸ್ವಿ ಕಾರ್ಯಕ್ರಮವನ್ನಾಗಿ ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಏರ್ಪಡಿಸಿರುವ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+