ಮಧ್ಯರಾತ್ರಿ ಚಾರ್ಮಾಡಿ ಘಾಟ್‌ ಬಳಿ ಕೆಟ್ಟುನಿಂತ KSRTC ಬಸ್‌, ನೆರವಾಗಿದ್ದು ಆ ಒಂದೇ ಒಂದು ಟ್ವೀಟ್‌

ಬೆಂಗಳೂರು, ಸೆ.05: ಸಾಮರ್ಥ್ಯಕ್ಕೂ ಮೀರಿ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಧರ್ಮಸ್ಥಳದಿಂದ ಗದಗದ ಮುಂಡರಗಿಗೆ ತೆರಳುತ್ತಿದ್ದ ಬಸ್ಸೊಂದು ಭಾನುವಾರ (ಸೆಪ್ಟೆಂಬರ್‌ 03) ರಾತ್ರಿ 9 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಇದರಿಂದ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಸಹಾಯವಾಣಿಗೆ ಕರೆ ಮಾಡಿ ಎಷ್ಟೇ ಸಂಪರ್ಕಿಸಲು ಪ್ರಯತ್ನಿಸಿದರೂ ಎರಡು ಗಂಟೆಗಳ ಕಾಲ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕೊನೆಗೆ ಪ್ರಯಾಣಿಕರಲ್ಲೊಬ್ಬರಾದ ರಘು ಎಂಬುವರು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೇಳಿದ್ದಾರೆ. ಮುಂದೇನಾಯ್ತು ಎಂದು ತಿಳಿಯಿರಿ

ರಘು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೇಳಿದ ಬಳಿಕ ಪರ್ಯಾಯ ಬಸ್​ ವ್ಯವಸ್ಥೆ ಮಾಡಲಾಯಿತು. ಆದರೆ ಸಾಮರ್ಥ್ಯಕ್ಕೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಬಸ್​ನಲ್ಲಿ ಹತ್ತಿಸಿಕೊಳ್ಳುವ ಬಗ್ಗೆ ರಘು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ksrtc bus breaks down latenight near charmadi ghat, What did passengers do for help?

ಚಾರ್ಮಾಡಿ ಘಾಟ್ ಬಳಿ ಬಸ್ ಕೆಟ್ಟುಹೋದ ಕಾರಣ 70ಕ್ಕೂ ಹೆಚ್ಚು ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದರು. ಧರ್ಮಸ್ಥಳದಿಂದ ಹೊರಟ ಬಸ್ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಈ ಸಮಯದಲ್ಲಿ ಈ ಮಾರ್ಗದಲ್ಲಿ ಬೇರೆ ಯಾವುದೇ ಬಸ್ಸುಗಳಿಲ್ಲ. ದಯವಿಟ್ಟು ಸಹಾಯ ಮಾಡಿ, ಮಳೆ ಬಂದರೆ ಏನು ಗತಿ? ಎಂದು ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ಬಸ್ ಕೆಟ್ಟು ಹೋದ ಪರಿಣಾಮ ರಸ್ತೆ ಬದಿ ಪ್ರಯಾಣಿಕರು ವಿಶ್ರಾಂತಿ ಪಡೆಯುತ್ತಿದ್ದ ಫೋಟೋವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ ಅಂತಾ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ರಘು ಅವರ ಟ್ವೀಟ್‌ಗೆ ಕೆಎಸ್‌ಆರ್‌ಟಿಸಿ ಪ್ರತಿಕ್ರಿಯಿಸಿದ್ದು, "ದಯವಿಟ್ಟು ಬಸ್ ಸಂಖ್ಯೆ ಅಥವಾ ಪಿಎನ್‌ಆರ್ ಪ್ರಯಾಣದ ವಿವರಗಳನ್ನು ಒದಗಿಸಿ" ಎಂದು ಕೇಳಿತು. ತಕ್ಷಣವೇ ರಘು ಮಾಹಿತಿ ನೀಡಿದ್ದಾರೆ. ಅಲ್ಲದೆ ಬೆಂಗಳೂರಿನ KSRTC ಅಧಿಕಾರಿಗಳಿಗೆ ಕರೆ ಮಾಡಿ ಈ ಬಗ್ಗೆ ಕೇಳಿದಾಗ, ಪುತ್ತೂರಿನಲ್ಲಿರುವ KSRTC ವಿಭಾಗೀಯ ನಿಯಂತ್ರಕರೊಂದಿಗೆ ಮಾತನಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಚಾರ್ಮಾಡಿ ಘಾಟ್​ಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತದೆ. ಪ್ರಯಾಣಿಕರನ್ನು ಕರೆದುಕೊಂಡು ಬರಲಾಗುತ್ತೆ ಎಂದು ತಿಳಿಸಿದರು.

ಪುತ್ತೂರು ಡಿಸಿ ಜೈಕರ್ ಶೆಟ್ಟಿ ಮಾತನಾಡಿ, ಚಾರ್ಮಾಡಿ ಘಾಟ್​ನಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಅವರು ಹೋಗಬೇಕಿದ್ದ ಜಾಗಕ್ಕೆ ಕಳುಹಿಲಾಗಿದೆ. ಚಾಲಕ ಸ್ವತಃ ಧರ್ಮಸ್ಥಳಕ್ಕೆ ಪ್ರಯಾಣಿಸಿ ಪರ್ಯಾಯ ಬಸ್ ಅನ್ನು ತೆಗೆದುಕೊಂಡು ಪ್ರಯಾಣವನ್ನು ಮುಂದುವರೆಸಿದರು ಎಂದು ತಿಳಿಸಿದರು.

ನಂತರ ತಡ ರಾತ್ರಿ 12.55ಕ್ಕೆ ರಘು ಅವರು ಟ್ವೀಟ್ ಮಾಡಿ, ಅಂತಿಮವಾಗಿ ಸಾರಿಗೆ ಇಲಾಖೆಯಿಂದ ಸಹಾಯ ಸಿಕ್ಕಿದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ 54 ಆಸನಗಳ ಸಾಮರ್ಥ್ಯವಿರುವ ಬಸ್​ನಲ್ಲಿ 78 ಜನರನ್ನು ಹತ್ತಿಸಿಕೊಳ್ಳಲಾಗಿದೆ. ಯಾರಾದರೂ ಈ ಬಗ್ಗೆ ಗಮನಹರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+