ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಚಿಕ್ಕಮಗಳೂರು, ಆಗಸ್ಟ್, 08: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ (KSRTC) ಬಸ್‌ವೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮೇಲೆ ಮರ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್ ಬೆಳಗ್ಗೆ 6 ಗಂಟೆಗೆ ಎನ್.ಆರ್.ಪುರದಿಂದ ಮೈಸೂರಿಗೆ ಹೊರಟಿತ್ತು. ಈ ವೇಳೆ ಸುಮಾರು 15 ಕಿಲೋಮೀಟರ್ ದೂರ ಕ್ರಮಿಸಿದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ. ಪರಿಣಾಮ ಮರ ಬಸ್‌ನ ಮೇಲೆ ಬಿದ್ದು ಕೆಲವು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಬಸ್‌ನಲ್ಲಿ ಸುಮಾರು 28 ಜನ ಪ್ರಯಾಣಿಕರಿದ್ದು, ಇದರಲ್ಲಿ 10-12 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಗಾಯಾಳುಗಳನ್ನು ಎನ್.ಆರ್.ಪುರ ಹಾಗೂ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications