ಚಿಕ್ಕಮಗಳೂರಿನ ಜನರೇ ಎಚ್ಚರ! ಹೆಚ್ಚುತ್ತಿದೆ ಮಂಗನ ಕಾಯಿಲೆ ಆತಂಕ, ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಚಿಕ್ಕಮಗಳೂರು, ಫೆಬ್ರವರಿ 02: ಶಿವಮೊಗ್ಗ ಜಿಲ್ಲೆಯಲ್ಲಿ ಆರಂಭವಾದ ಮಂಗನ ಕಾಯಿಲೆ ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹಬ್ಬುತ್ತಿದ್ದು, ಆತಂಕ ಹೆಚ್ಚಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂವರಲ್ಲಿ ಮಂಗನ ಕಾಯಿಲೆ ದೃಢವಾಗಿದ್ದು ಚಿಕ್ಕಮಗಳೂರಿನ ಜನತೆಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಎರಡು, ಶೃಂಗೇರಿ ತಾಲೂಕಿನ ಓರ್ವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ.

Kyasanur Forest Disease Increasing In Chikkamagaluru District

ಉತ್ತರ ಕನ್ನಡದಲ್ಲಿಯೂ ಮಂಗನ ಕಾಯಿಲೆ ಹಾವಳಿ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಸಿದ್ದಾಪುರದ ಕೊರ್ಲಕೈದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 7 ಪ್ರಕರಣಗಳು ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿ ಕೇವಲ 10 ದಿನದಲ್ಲಿ 16 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಕಳೆದ ಐದು ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿದ್ದು, ಈ ಪೈಕಿ 8 ಜನ ಕಾಯಿಲೆ ಉಲ್ಬಣಗೊಂಡು ಸಾವನ್ನಪ್ಪಿದ್ದರು.

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವತಿ ಬಲಿ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತುದ್ದು, ಕಳೆದ ತಿಂಗಳು ಮಂಗನ ಕಾಯಿಲೆಯಿಂದ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದ 18 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಇದು ಮಂಗನ ಕಾಯಿಲೆಗೆ ಈ ವರ್ಷ ಮೃತಪಟ್ಟ ಮೊದಲ ಪ್ರಕರಣವಾಗಿದೆ.

ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.

Kyasanur Forest Disease Increasing In Chikkamagaluru District

ಮಂಗನ ಕಾಯಿಲೆ ಎಂದರೇನು..?

ಮಂಗನ ಕಾಯಿಲೆ ಕೆ ಎಫ್ ಡಿವಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್ ವೈರಸ್) ಎಂಬ ವೈರಸ್‌ನಿಂದ ಹರಡುವ ಕಾಯಿಲೆಯಾಗಿದೆ. ರೋಗಗ್ರಸ್ತ ಕೋತಿಯ ದೇಹದಲ್ಲಿದ್ದ ಉಣ್ಣಿ ಅಥವಾ ಉಣುಗು(Tick) ಕೋತಿ ಮರಣ ಹೂಂದಿದ ನಂತರ ಉದುರಿ ಗಾಳಿಯ ಮೂಲಕ, ಅಥವಾ ಜಾನುವಾರುಗಳ ಮೂಲಕ ಇಲ್ಲವೇ ನೇರವಾಗಿ ಮನುಷ್ಯನ ದೇಹಕ್ಕೆ ಅಂಟಿಕೊಳ್ಳುತ್ತದೆ. ಅದು ಕಚ್ಚುವುದರಿಂದ ವೈರಾಣು ಮನುಷ್ಯನ ದೇಹ ಪ್ರವೇಶಿಸಿ, ರೋಗ ಉಂಟು ಮಾಡುತ್ತದೆ. 1957ರಲ್ಲಿ ಮರಣ ಹೊಂದಿದ ಕೋತಿಯಲ್ಲಿ ಮೊದಲ ಬಾರಿಗೆ ಈ ವೈರಸ್ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಮಂಗನ ಕಾಯಿಲೆ ಲಕ್ಷಣಗಳೇನು..?

ಮಂಗನ ಕಾಯಿಲೆ ಬಂದ ವ್ಯಕ್ತಿಯಲ್ಲಿ ಮೊದಲು ಜ್ವರ ಕಾಣಿಸುತ್ತದೆ. ಒಂದು ವಾರದ ಬಳಿಕ ತಲೆನೋವು, ಮೈಕೈ ನೋವು, ಕೀಲು ನೋವು, ನಿಶಕ್ತಿ, ವಾಂತಿ ಭೇದಿ, ಹೊಟ್ಟೆ ನೋವು, ಕಣ್ಣು ಕೆಂಪಾಗುವುದು ಕ್ಯಾಸನೂರು ಫಾರೆಸ್ಟ್ ಡಿಸೀಸ್ ವೈರಸ್‌ ಸೋಂಕಿನ ಲಕ್ಷಣವಾಗಿದೆ. ಸೂಕ್ತವಾದ ಲಸಿಕೆ ಚಿಕಿತ್ಸೆ ಇಲ್ಲದಿರುವ ಕಾರಣ ಈಗೀಗ ಇದು ಮಾರಣಾಂತಿಕ ಕಾಯಿಲೆಯಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+