ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಂಗಳೂರು ಕೈದಿಗಳ ಸ್ಥಳಾಂತರ
ಚಿಕ್ಕಮಗಳೂರು, ಏಪ್ರಿಲ್ 18: ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆ ಹಿನ್ನೆಲೆಯಲ್ಲಿ ಅಲ್ಲಿನ ಕಾರಾಗೃಹದಿಂದ ಕೈದಿಗಳನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಗೊಂಡಿದೆ.
ಇದೀಗ ಕೊರೊನಾದಿಂದಾಗಿ ಲಾಕ್ ಡೌನ್ ಮಾಡಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಹೀಗಾಗಿ ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ ಇಲ್ಲಿಗೆ ಸ್ಥಳಾಂತರಿಸುತ್ತಿರುವುದಾಗಿ ತಿಳಿದುಬಂದಿದೆ.

ಮಂಗಳೂರಿನಿಂದ ಸುಮಾರು ನಲವತ್ತಕ್ಕೂ ಹೆಚ್ಚು ಕೈದಿಗಳನ್ನು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಚಿಕ್ಕಮಗಳೂರಿಗೆ ಸ್ಥಳಾಂತರಿಸಲಾಗಿದೆ. ಎರಡು ಬಸ್ಸುಗಳಲ್ಲಿ ಕೈದಿಗಳನ್ನು ಕರೆತರಲಾಗಿದೆ.
ಈ ನಡೆಗೆ ಸ್ಥಳೀಯ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳೂರು ಕೈದಿಗಳನ್ನು ವಾಪಸ್ ಕಳುಹಿಸುವಂತೆ ಒತ್ತಾಯಿಸಿದ್ದಾರೆ.












Click it and Unblock the Notifications