ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾರ್ಮಾಡಿ ಘಾಟ್ ನಲ್ಲಿ ಬಿರುಕು ಬಿಟ್ಟ ರಸ್ತೆ; ಸಂಚಾರ ಬಂದ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್‌ 07: ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಇಂದು ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಬೃಹತ್ ಗಾತ್ರದ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ.

Recommended Video

IPL 2020: Players who owe their career to RCB | Oneindia Kannada

ಮೊನ್ನೆಯಷ್ಟೇ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಜರುಗಿದೆ. ಬೃಹತ್ ಗಾತ್ರದ ಬಂಡೆಗಳು, ಮಣ್ಣು ರಸ್ತೆ ಮೇಲೆ ಬಿದ್ದಿದ್ದು, ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ರಸ್ತೆಯೂ ಎರಡು ಭಾಗ ಆಗುವ ಸಾಧ್ಯತೆ ಕಂಡುಬಂದಿದೆ. ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ್ದರಿಂದ ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದು ನಿಲ್ಲಿಸಲಾಗಿದೆ, ಹೀಗಾಗಿ ಕೊಟ್ಟಿಗೆ ಹಾರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ

Rain in Chikkamagaluru: Landslide And Road Cracked At Charmadi Ghat

ಮತ್ತೆ ಸಂಚಾರ ಬಂದ್ ಆಗಿದ್ದು, ಭಾರಿ ಮಳೆಯ ಮಧ್ಯೆಯೂ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸದಂತೆ ಪೊಲೀಸರು ಸೂಚನೆ ಹೊರಡಿಸಿದ್ದಾರೆ.

English summary
Heavy rain since three days caused landslide in charmadi ghat again today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X