ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಚಾರ್ಮಾಡಿಯಲ್ಲಿ ಮಣ್ಣು ಕುಸಿತ

ಚಿಕ್ಕಮಗಳೂರು, ಆಗಸ್ಟ್‌ 03: ಮಲೆನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು ಸುತ್ತಮುತ್ತ‌ ಭಾರೀ ಮಳೆಯಾಗಿದೆ.

ನಿರಂತರ ಜೋರು ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಘಾಟ್ ನ ಕೆಲವೆಡೆ ರಸ್ತೆಯಲ್ಲೇ ಕಲ್ಲು ಮಣ್ಣು ಬಿದ್ದಿವೆ. ಕಳೆದ ವರ್ಷವೂ ಆಗಸ್ಟ್‌ ತಿಂಗಳಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು, ಜನರು ಮನೆ, ಪ್ರಾಣ, ಜಮೀನು ಕಳೆದುಕೊಂಡಿದ್ದರು.

 Landslide In Charmadi Ghat By Heavy Rain In Chikkamagaluru District

ಮತ್ತೆ ಇಂದು ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತವಾಗಿರುವುದರಿಂದ ಇಲ್ಲಿ ಓಡಾಡುವ ವಾಹನ ಸವಾರರಲ್ಲಿ ಆತಂಕ ಮೂಡಿದೆ. ಜಿಲ್ಲೆಯಾದ್ಯಂತ ಬಿಟ್ಟೂ ಬಿಡದೇ ಮಳೆಯಾಗುತ್ತಿರುವುದರಿಂದ ಸ್ಥಳೀಯರಲ್ಲಿ ಭಯವೂ ಆವರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+