ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಳ್ಳಯ್ಯನಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರೋ ಪ್ರವಾಸಿಗರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಸೆಪ್ಟೆಂಬರ್ 6: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

Recommended Video

ಹೇಳೋರಿಲ್ಲ ಕೇಳೋರಿಲ್ಲ ಸುವರ್ಣಸೌಧವನ್ನ!! ಪಾಚಿ ಕಟ್ಟಿ ಅದ್ವಾನವಾಗಿ ಹೋಗಿದೆ | Oneindia Kannada

ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಜಾತ್ರೆಯ ರೂಪದಲ್ಲಿ ಹರಿದುಬಂದಿದ್ದರು. 780 ಕಾರು, 380 ಬೈಕ್, 70 ಟಿ.ಟಿ. ವಾಹನಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಚಿಕ್ಕಮಗಳೂರು: ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರಚಿಕ್ಕಮಗಳೂರು: ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ

ಕಳೆದ ಐದಾರು ತಿಂಗಳಿಂದ ಲಾಕ್ ಡೌನ್ ಆಗಿದ್ದ ಮುಳ್ಳಯ್ಯನಗಿರಿ ಪ್ರವಾಸಿ ತಾಣವು ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಚಿಕ್ಕಮಗಳೂರಿನ ಪ್ರವಾಸಿ ತಾಣಗಳ ನಿರ್ಬಂಧ ತೆರವಾಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ರಾಜ್ಯದ ಮೂಲೆ-ಮೂಲೆಗಳಿಂದ ಗಿರಿಧಾಮಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದಾರೆ.

Chikkamagaluru: A Large Number Of Tourists Coming To Mullayanagiri Hill

ಕರ್ನಾಟಕ ರಾಜ್ಯದ ಅತ್ಯಂತ ಎತ್ತರದ ಶಿಖರ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದು, ಮಳೆಯಿಂದ ಹಚ್ಚ ಹಸಿರಾಗಿ ಕಂಗೊಳಿಸುತ್ತಿದೆ.

Chikkamagaluru: A Large Number Of Tourists Coming To Mullayanagiri Hill

ಚಿಕ್ಕಮಗಳೂರಲ್ಲಿ 239 ಮಂದಿಗೆ ಕೊರೊನಾ ಪಾಸಿಟಿವ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 239 ಮಂದಿಗೆ ಕೊರೊನಾ ಸೋಂಕು ವರದಿಯಾಗಿದೆ. ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಚಿಕ್ಕಮಗಳೂರು 122, ತರೀಕೆರೆ 45, ಕಡೂರು 19, ಮೂಡಿಗೆರೆ 26, ಎನ್.ಆರ್ ಪುರ 11, ಶೃಂಗೇರಿ 9, ಕೊಪ್ಪದಲ್ಲಿ 7 ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯಲ್ಲಿ 3517 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5201ಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಈವರೆಗೆ 87 ಮಂದಿ ಮೃತಪಟ್ಟಿದ್ದಾರೆ.

English summary
Tourist place Mullayanagiri in Chikkamagalur is becoming increasingly crowded with tourists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X