Chikkamagaluru: ಚಿಕ್ಕಮಗಳೂರಿನಲ್ಲಿ ಬರೋಬ್ಬರಿ 45 ಲಕ್ಷ ನಗದು ವಶ
ಚಿಕ್ಕಮಗಳೂರು, ಏಪ್ರಿಲ್ 04: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾತಿಯಲ್ಲಿದೆ. ಹೀಗಾಗಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಅನಧೀಕೃತವಾಗಿ ಸಾಗಿಸುತ್ತಿರುವ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.
ಪೂರಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂಪಾಯಿ ನಗದು ಹಣವನ್ನು ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಯಮ ಉಲ್ಲಂಘಿಸಿ ಬಾಣಾವಾರದಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಯಾವುದೇ ಪೂರಕ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು.

ಈ ಸಂದರ್ಭದಲ್ಲಿ ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಗ್ರಾಮದ ಬಳಿಯ ಮಾಚಗೊಂಡನಹಳ್ಳಿ ಚೆಕ್‌ಪೋಸ್ಟ್ ಬಳಿ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ್ದಾರೆ. ಬ್ಯಾಗ್‌ನಲ್ಲಿ 45 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಖರಾಯಪಟ್ಟಣ ಪಿಎಸೈ ಕಿರಣ್, ಆನಂದಪ್ಪ, ಶ್ರೀಧರ್, ಕಾರ್ತಿಕ್ ಮತ್ತಿತರಿದ್ದರು ಹಾಜರಿದ್ದರು.
ಬೈಕ್ ವೀಲಿಂಗ್ ಹುಚ್ಚಾಟ-ಯುವಕನಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಚಿಕ್ಕಮಗಳೂರು: ರಸ್ತೆಯಲ್ಲಿ ಅಪಾಯಕಾರಿಯಾಗಿ ಬೈಕ್ ವೀಲಿಂಗ್ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಹಿಡಿದು ಬೈಕ್ ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ನಗರದ ವಿಜಯಪುರದ ಬದ್ರೀಯ ಸರ್ಕಲ್ ರಸ್ತೆಯಲ್ಲಿ ಯುವಕನೊಬ್ಬ ಅಪಾಯಕಾರಿಯಾಗಿ ಬೈಕ್ ವೀಲಿಂಗ್ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಬಸವನಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ವೀಲಿಂಗ್ ನಡೆಸುತ್ತಿದ್ದ ಚಿಕ್ಕಮಗಳೂರು ತಾಲೂಕು ಬ್ಯಾಗದಹಳ್ಳಿ ನಿವಾಸಿ ಅರುಣ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಫೀಲಿಂಗ್‌ಗೆ ಬಳಸಿದ್ದ ಬೈಕ್‌ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾರ್ಮಾಡಿ ಘಾಟಿಯಲ್ಲಿ 12 ಚಕ್ರದ ಲಾರಿ ಲಾಕ್, ಟ್ರಾಫಿಕ್ ಜಾಮ್
ಚಿಕ್ಕಮಗಳೂರ: ಚಾರ್ಮಾಡಿ ಘಾಟಿಯಲ್ಲಿ 12 ಚಕ್ರದ ಲಾರಿ ಲಾಕ್ ಆದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ 12 ಚಕ್ರದ ಲಾರಿ ನಿಂತಿದೆ. ಬೆಳಗ್ಗೆಯಿಂದ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರ ಪರದಾಡುವಂತಾಗಿದೆ.
ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು ಬಳ್ಳಾರಿಯಿಂದ ಮಂಗಳೂರಿಗೆ ತೆರಳುತ್ತಿದ್ದ 12 ಚಕ್ರದ ಲಾರಿ ಇದಾಗಿದೆ. ಚಾರ್ಮಾಡಿಯಲ್ಲಿ ಭಾರೀ ವಾಹನಗಳಿಗೆ ನಿಷೇಧವಿದ್ದರೂ ಸಂಚಾರ ಮಾಡಲಾಗಿದ್ದು ಚೆಕ್ ಪೋಸ್ಟ್ ಇದ್ದರೂ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಕಳೆದ 2 ಗಂಟೆಯಿಂದ ತಿರುವಿನಲ್ಲಿ ಮುಂದೆ ಹೋಗಲಾಗದೆ ಲಾರಿ ಲಾಕ್ ಆಗಿದೆ.












Click it and Unblock the Notifications