Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರು: ರಾಜ್ಯದ ಮೊದಲ ಪೊಲೀಸ್ ಠಾಣೆಯಲ್ಲಿ ಲೋಕಸ್ಪಂದನಕ್ಕೆ ಚಾಲನೆ, ಇದರ ವಿಶೇಷತೆ ತಿಳಿಯಿರಿ

ಚಿಕ್ಕಮಗಳೂರು, ಸೆಪ್ಟೆಂಬರ್‌, 25: ಚಿಕ್ಕಮಗಳೂರಿನಲ್ಲಿ ರಾಜ್ಯದ ಮೊದಲ ಪೊಲೀಸ್ ಠಾಣೆಯಲ್ಲಿ ಲೋಕಸ್ಪಂದನಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದ್ದಾರೆ.

ಚಿಕ್ಕಮಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮವಾಗಿ ಲೋಕ ಸ್ಪಂದನ ಕಾರ್ಯಕ್ರಮಕ್ಕೆ ಸಚಿವ ಕೆ.ಜೆ.ಜಾರ್ಜ್ ಅವರು ಚಾಲನೆ ನೀಡಿದರು. ಇನ್ನು ಈ ಕಾರ್ಯಕ್ರಮದಡಿ ಪ್ರತಿ ದೂರುದಾರರು ಲೋಕ ಸ್ಪಂದನ ಅಡಿಯಲ್ಲಿಯೇ ದೂರು ನೀಡಬಹುದು. ದೂರು ನೀಡಿದ ನಂತರ 6 ಮಾಹಿತಿಗಳನ್ನು ನೀಡಲಿರುವ ದೂರುದಾರರು ನಂತರ ಹಣ, ಸ್ಪಂದನೆ, ಪೊಲೀಸರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ರವಾನೆ ಆಗಲಿದೆ.

Lokspandan Inauguration in first police station of state at chikkamagaluru

ಆ ಮಾಹಿತಿ ಆಧರಿಸಿ ಅತೀ ಹೆಚ್ಚು ದೂರು ಬಂದರೇ ಕ್ರಮಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಚಾಲನೆ ನೀಡಿದ್ದಾರೆ. ಈ ವೇಳೆ ಶಾಸಕ ಎಚ್‌.ಡಿ.ತಮ್ಮಯ್ಯ, ಎಸ್ಪಿ ವಿಕ್ರಮ ಅಮಟೆ, ಡಿಸಿ ಮೀನಾನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಹಾಗೂ ನಾಗರೀಕರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಸಮಸ್ಯೆಗಳ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ರತ್ನಗಿರಿ ರಸ್ತೆಯ ಕ.ವಿ.ಪ್ರ.ನಿ.ನಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅವರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಧಿಕಾರಿಗಳು, ರಾಜಕಾರಣಿಗಳು ನಾವೆಲ್ಲರೂ ಜನಸೇವಕರು, ಜನರ ಸೇವೆ ಮಾಡಲು ಬಂದವರು ಅಧಿಕಾರಿಗಳು. ಅದನ್ನು ಅರ್ಥ ಮಾಡಿಕೊಂಡು ಸಾರ್ವಜನಿಕರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಬೇಕು. ಅವರ ಅರ್ಜಿಗಳನ್ನು ಹೆಚ್ಚು ದಿನ ಇಟ್ಟುಕೊಂಡು ಸತಾಯಿಸಬಾರದು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಕೊಡಬಾರದು ಎಂದು ಕಿವಿಮಾತು ಹೇಳಿದರು.

ಹಿಂದೆಲ್ಲಾ ಸಾರ್ವಜನಿಕರ ಅರ್ಜಿಗಳನ್ನು ಅಧಿಕಾರಿಗಳು ತಿಂಗಳುಗಟ್ಟಲ್ಲೇ ಇಟ್ಟುಕೊಂಡರೂ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಯಾರ ಬಳಿ ಎಷ್ಟು ದಿನದಿಂದ ಅರ್ಜಿಗಳು ಇವೆ ಎಂದು ಇ-ಆಫೀಸ್ ಮಾಡಿರುವುದರಿಂದ ತಕ್ಷಣ ಗೊತ್ತಾಗುತ್ತದೆ ಎಂದು ಎಚ್ಚರಿಸಿದ ಅವರು, ಹಾಗಾಗಿ ಅನಗತ್ಯವಾಗಿ ಅರ್ಜಿಗಳನ್ನು ಇಟ್ಟುಕೊಳ್ಳದೆ ಸಾರ್ವಜನಿಕರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಬೇಕು ಎಂದು ಸೂಚಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಗೃಹಜೋತಿ ಯೋಜನೆಯಡಿ 2,52,469 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಗೃಹಲಕ್ಷ್ಮಿಯಲ್ಲಿ 2,37,464 ಅರ್ಜಿ ಶಕ್ತಿ ಯೋಜನೆಯಡಿ 1.12. 87. 614 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ಇನ್ನು ಅನ್ನಭಾಗ್ಯ ಯೋಜನೆಯಲ್ಲಿ 2,35,500 ಫಲಾನುಭವಿಗಳಿಗೆ ನೇರವಾಗಿ ವಿತರಣೆ ಮಾಡಿದ್ದೇವೆ ಎಂದು ಹೇಳಿದರು

ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನಿರ್ದೇಶನದಂತೆ ಕಂದಾಯ ಇಲಾಖೆ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಕಳೆದ ಮೂರು ತಿಂಗಳಿನಿಂದ 8400 ಪೆನ್ಷನ್‌ಗಳನ್ನು ಹಾಗೂ 5,500 ಹೊಸ ಪೆನ್ಷನ್‌ಗಳನ್ನು ನೀಡಲಾಗಿದೆ ಎಂದರು. ಅಲಿನೇಶನ್ಸ್ ಸೇವಾ ಸಿಂಧು ಪ್ರಮಾಣ ಪತ್ರ ಸೇರಿದಂತೆ ಆನ್ಲೈನ್ ಸೇವೆಗಳನ್ನು ಪೂರ್ಣ ಪ್ರಮಾಣದಲ್ಲಿ ಇಂಪ್ಲಿಮೆಂಟೇಶನ್ ಮಾಡಲಾಗಿದೆ. ಸಕಾಲ ಸೇವೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 7ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಕಳೆದ ಮೂರು ತಿಂಗಳಿನಿಂದ ಇಂಟರ್ನೆಟ್ ಸಂಪರ್ಕದ ಕೊರತೆಯ ನಡುವೆಯೂ ಒಂದು ಅರ್ಜಿಯೂ ತಿರಸ್ಕೃತವಾಗದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ 15 ದಿನಗಳಿಗೊಮ್ಮೆ ತಾಲೂಕುಗಳಿಗೆ ಭೇಟಿ ನೀಡಲಾಗುವುದು. ಜಿಲ್ಲಾ ಪಂಚಾಯತಿ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ ಪೊಲೀಸ್‌ ಇಲಾಖೆ ಸಹ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅರ್ಜಿಗಳನ್ನು ತಿರಸ್ಕೃತಗೊಳಿಸಬೇಕಾದರೆ ಅದಕ್ಕೆ ಕಾರಣವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನತಾದರ್ಶನದಲ್ಲಿ ಅರ್ಜಿ ಸಲ್ಲಿಸಿದವರಿಗೆ ಒಂದು ತಿಂಗಳಲ್ಲಿ ಅರ್ಜಿ ಯಾವ ರೀತಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಮಾತನಾಡಿ, ಫಾರಂ 57ರಲ್ಲಿ ಸ್ವೀಕೃತವಾಗಿರುವ ಅರ್ಜಿ ವಿಲೇವಾರಿ ಮಾಡಲು ಜಂಟಿ ಸರ್ವೆ ನಡೆಸಿದ ನಂತರ ಕ್ರಮವಹಿಸಲಾಗುವುದು. ಜನತಾ ದರ್ಶನದಲ್ಲಿ 320 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳ ಇತ್ಯರ್ಥಕ್ಕೆ ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮವಹಿಸುವಂತೆ ಸೂಚಿಸಿದರು.

ಈ ವೇಳೆ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ, ಶಾಸಕರುಗಳಾದ ಟಿ.ಡಿ. ರಾಜೇಗೌಡ, ಜಿ.ಹೆಚ್. ಶ್ರೀನಿವಾಸ್, ಕೆ.ಎಸ್. ಆನಂದ, ನಯನ ಮೋಟಮ್ಮ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+