ಬೈಕ್ ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
ಚಿಕ್ಕಮಗಳೂರು, ಮೇ 25: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕದ್ರಿಮಿದ್ರಿ ಸಮೀಪ ನಡೆದಿದೆ.
ಮಹೇಶ್ (43), ಲೋಕೇಶ್ (40) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರು. ಮೃತರು ತೇಗೂರಿನ ನಿವಾಸಿಗಳೆಂದು ತಿಳಿದುಬಂದಿದೆ. ತೇಗೂರಿನಿಂದ ಗಾರೆ ಕೆಲಸಕ್ಕೆ ಗೆಂಡೇಹಳ್ಳಿಗೆ ಹೋಗುತ್ತಿದ್ದ ಸಂದರ್ಭ ಕದ್ರಿಮಿದ್ರಿಯಿಂದ ಇಂಡಸ್ಟ್ರಿಯಲ್ ಪ್ರದೇಶಕ್ಕೆ ಹೋಗುತ್ತಿದ್ದ ಲಾರಿ ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.












Click it and Unblock the Notifications