ಚಿಕ್ಕಮಗಳೂರಿನಲ್ಲಿ ಮನೆಗೇ ನುಗ್ಗಿದ ಲಾರಿ; ಆಟವಾಡುತ್ತಿದ್ದ ಬಾಲಕ ಸಾವು

ಚಿಕ್ಕಮಗಳೂರು, ಆಗಸ್ಟ್ 13: ತರಕಾರಿ ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ನಡೆದಿದೆ.

Recommended Video

      DJ ಹಳ್ಳಿಯಲ್ಲಿ ಇದೀಗ ಶುರುವಾಯ್ತು ಹೊಸ ಆತಂಕ | Oneindia Kannada

      ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಮಗಳೂರಿನಿಂದ ಕುಂದಾಪುರ ಮಾರ್ಗವಾಗಿ ತರಕಾರಿ ಲಾರಿ ಹೋಗುತ್ತಿತ್ತು. ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಗೆ ಲಾರಿ ನುಗ್ಗಿದೆ. ಅಲ್ಲೇ ಮನೆ ಮುಂದೆ ಆಟವಾಡಿಕೊಂಡಿದ್ದ ಬಾಲಕನ ಮೇಲೆ ಲಾರಿ ಎರಗಿ ಬಂದಿದ್ದು, ಸುರೇಶ್ (10) ಎಂಬ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

      Chikkamagaluru: Lorry Rushed To Home In Jenugadde Village

      ಮಂಜುನಾಥಗೌಡ ಎಂಬುವರ ಲೈನ್ ಮನೆಯಲ್ಲಿ ಈ ಕಾರ್ಮಿಕ ಕುಟುಂಬ ವಾಸವಾಗಿತ್ತು. ಲಾರಿ ನುಗ್ಗಿದ ರಭಸಕ್ಕೆ ಮನೆಯ ಅರ್ಧ ಭಾಗ ಸಂಪೂರ್ಣ ಜಖಂ ಆಗಿದೆ. ಪುಟ್ಟ ಬಾಲಕನ ಪ್ರಾಣವೂ ಹೋಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+