ಚಿಕ್ಕಮಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದವೆಂದು ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಮಗಳೂರು, ಆಗಸ್ಟ್ 11: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಅಂಕ ಬರದ ಕಾರಣ ಚಿಕ್ಕಮಗಳೂರು ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ವಿದ್ಯಾ(16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಮಗಳೂರು ತಾಲ್ಲೂಕಿನ ಕಮ್ಮರಡಿಯ ವಿಶ್ವತೀರ್ಥ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾಳಿಗೆ, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.67 ಅಂಕ ಬಂದಿದ್ದವು. ಈ ಅಂಕಗಳು ತೃಪ್ತಿತರದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸೋಮವಾರದ ಪರೀಕ್ಷೆಯ ಫಲಿತಾಂಶ ನೋಡಿದ ನಂತರ ಬೇಸರಗೊಂಡ ವಿದ್ಯಾರ್ಥಿನಿ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ತಂದೆ ಮಂಜುನಾಥ್ ಹರಿಹರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ.