ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದವೆಂದು ವಿದ್ಯಾರ್ಥಿನಿ ಆತ್ಮಹತ್ಯೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 11: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಅಂಕ ಬರದ ಕಾರಣ ಚಿಕ್ಕಮಗಳೂರು ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ವಿದ್ಯಾ(16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಿಕ್ಕಮಗಳೂರು ತಾಲ್ಲೂಕಿನ ಕಮ್ಮರಡಿಯ ವಿಶ್ವತೀರ್ಥ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾಳಿಗೆ, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.67 ಅಂಕ ಬಂದಿದ್ದವು. ಈ ಅಂಕಗಳು ತೃಪ್ತಿತರದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Low Score Of SSLC Exam: Student Suicide In Chikkamagaluru

ಸೋಮವಾರದ ಪರೀಕ್ಷೆಯ ಫಲಿತಾಂಶ ನೋಡಿದ ನಂತರ ಬೇಸರಗೊಂಡ ವಿದ್ಯಾರ್ಥಿನಿ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ತಂದೆ ಮಂಜುನಾಥ್ ಹರಿಹರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ.

English summary
Student Vidya (16) from Kodur village in Chikkamagalur taluk has committed suicide by hanging herself because she did not score as high as expected in the SSLC exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X