ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿ ಹೇಳಿಕೆ: ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ಕುಮಾರಸ್ವಾಮಿ!

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜನವರಿ 18: ಮುಖ್ಯಮಂತ್ರಿ ಯಡಿಯೂರಪ್ಪನವರ ಹೋರಾಟ, ಹುದ್ದೆ, ವಯಸ್ಸು, ನಡೆದು ಬಂದ ದಾರಿಗೆ ಬೆಲೆ ಕೊಡಬೇಕು ಎಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಸಿಎಂ ಯಡಿಯೂರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಮೂಡಿಗೆರೆಯಲ್ಲಿ ಮಾತನಾಡಿದ ಶಾಸಕ ಎಂ.ಪಿ.ಕುಮಾರಸ್ವಾಮಿ, ಪಕ್ಷದಲ್ಲಿ ಸಾಮಾಜಿಕ ನ್ಯಾಯ ಕಡಿಮೆಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಿಕೊಳ್ಳಲು ಅವಕಾಶವಿದೆ. ಸರಿಪಡಿಸಿದರೆ ಪಕ್ಷ ಸೇರಿದಂತೆ ಎಲ್ಲರಿಗೂ ಒಳ್ಳೆಯದು, ಸರಿಪಡಿಸುವಂತೆ ಅವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಯತ್ನಾಳ ಸಿಡಿ ಹೇಳಿಕೆ; ಯಾವ ಸಿಡಿನೂ ಇಲ್ಲ ಅಂದ್ರು ನಾಯಕರು! ಯತ್ನಾಳ ಸಿಡಿ ಹೇಳಿಕೆ; ಯಾವ ಸಿಡಿನೂ ಇಲ್ಲ ಅಂದ್ರು ನಾಯಕರು!

ಬಹಳ ಜನ ಮಂತ್ರಿ ಆಗಿಲ್ಲ. ಅವಕಾಶ ಸಿಕ್ಕಿಲ್ಲ. ಆ ನೋವು ಎಲ್ಲರಿಗೂ ಇದೆ. ಹಾಗಂತ ಖಾಸಗಿ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಾಯಕರ ಬಗ್ಗೆ ಮಾತನಾಡಿದರೆ ಪಕ್ಷದ ಬಗ್ಗೆ ಮಾತನಾಡಿದಂತೆ. ಅದು ಕಾರ್ಯಕರ್ತರಿಂದ ಹಿಡಿದು ಶಾಸಕರು, ಸಂಸದರು, ಮಂತ್ರಿಗಳು ಎಲ್ಲರಿಗೂ ಡ್ಯಾಮೇಜ್ ಆಗುತ್ತೆ ಅದು ಒಳ್ಳೆಯದಲ್ಲ ಎಂದರು.

 Chikkamagaluru: M.P Kumaraswamy Talked For CM Yediyurappa

ನಮ್ಮ ಪಕ್ಷದ ನಾಯಕರೇ ಸಿಡಿ ಬಗ್ಗೆ ಮಾತನಾಡುತ್ತಿದ್ದಾರೆ. ನಾಯಕರು ಸಿಡಿ ವಿಚಾರ ಮಾತನಾಡುವುದನ್ನು ಕೂಡಲೇ ನಿಲ್ಲಿಸಬೇಕು. ಖಾಸಗಿ ವಿಚಾರದಲ್ಲಿ ಹಿರಿಯ ನಾಯಕರು ಸಿಡಿ, ಅದು-ಇದು ಅಂತ ಮಾತನಾಡುತ್ತಾರೆ ಕೂಡಲೇ ಅದನ್ನ ನಿಲ್ಲಿಸಬೇಕು. ಈ ರೀತಿ ಖಾಸಗಿ ವಿಚಾರದಲ್ಲಿ ರಾಜಕೀಯ ಮಾಡುವುದು ಯಾರಿಗೂ ಸರಿಯಲ್ಲ. ಪಕ್ಷದ ವರಿಷ್ಠರು ಅದಕ್ಕೆ ನಿರ್ಬಂಧ ಹೇರಬೇಕು ಎಂದು ಎಂ.ಪಿ ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

 Chikkamagaluru: M.P Kumaraswamy Talked For CM Yediyurappa

Recommended Video

karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada

ಮೂಡುಗೆರೆ ಶಾಸಕ ಕುಮಾರಸ್ವಾಮಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಸರ್ಕಾರ ರಚನೆಯಾದಾಗಿನಿಂದ ಮೂರು ಬಾರಿ ಸಚಿವ ಸ್ಥಾನದ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಸಚಿವ ಸ್ಥಾನ ಸಿಕ್ಕಿರಲಿಲ್ಲ. ಮೊದಲ ಬಾರಿ ಸಚಿವರ ಪ್ರಮಾಣ ವಚನಕ್ಕೂ ಗೈರಾಗಿದ್ದರು. ಮೂರನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಮಧ್ಯೆಯೂ ಸಿಎಂ ಪರ ಬ್ಯಾಟ್ ಬೀಸಿರುವುದು ಕುತೂಹಲ ಮೂಡಿಸಿದೆ.

English summary
Mudigere MLA M.P Kumaraswamy in Chikkamagaluru district said that Chief Minister Yediyurappa's struggle, post and age should be honored.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X