Breaking: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ
ಚಿಕ್ಕಮಗಳೂರು, ಜೂನ್ 7: ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿ ಬೋಡು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ದೇವರಾಜ್ ಎಂಬಾತನೇ ಬಂಧಿತ ಆರೋಪಿ. ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಮನೆಗೆ ಬಿಡುವುದಾಗಿ ಹೇಳಿ ಬೈಕ್ನಲ್ಲಿ ಕೂರಿಸಿಕೊಂಡಿದ್ದ ದೇವರಾಜ್ ಮಧ್ಯದಾರಿಯಲ್ಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿದ್ಯಾರ್ಥಿನಿ ತಪ್ಪಿಸಿಕೊಂಡು ಓಡಿ ಹೋಗಿದ್ದಾಳೆ. ಆದರೆ ಆರೋಪಿ ಮಾತ್ರ ವಿದ್ಯಾರ್ಥಿನಿಯ ಫೋನ್ ನಂಬರ್ ತೆಗೆದುಕೊಂಡು ಸಂದೇಶಗಳನ್ನು ಮಾಡುವುದನ್ನು ಪೀಡಿಸಿದ್ದಾನೆ.
ಈ ವಿಚಾರವನ್ನು ಮನೆಯವರಿಗೆ ವಿದ್ಯಾರ್ಥಿನಿ ಮೊದಲಿಗೆ ಹೇಳಿಲ್ಲ, ಆದರೆ ಎರಡು ದಿನಗಳ ನಂತರ ಮೊಬೈಲ್ನಲ್ಲಿ ಸಂದೇಶಗಳನ್ನು ನೋಡಿದ ನಂತರ ತಂದೆ ಪ್ರಶ್ನೆ ಮಾಡಿದಾಗ ವಿದ್ಯಾರ್ಥಿನಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಅಂತೂರು ಗ್ರಾಮ ಪಂಚಾಯಿತಿಯಲ್ಲಿ ಅಟೆಂಡರ್ ಆಗಿ ಕಾರ್ಯನಿರ್ವಹಿಸುತ್ತಿರುವ ದೇವರಾಜ್ ಈ ಹಿಂದೆಯೂ ಓರ್ವ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಜಾಮೀನನ ಮೇಲೆ ಹೊರ ಬಂದಿದ್ದ. ಇದೀಗ ಮತ್ತೆ ತನ್ನ ಚಾಳಿಯನ್ನು ಮುಂದುವರಿಸಿದ್ದಾನೆ.
ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಮೇರೆಗೆ ಗೋಣಿಬೀಡು ಪೋಲಿಸರು ಆರೋಪಿ ದೇವರಾಜ್ನನ್ನು ಬಂಧಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications