ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದ ವ್ಯಕ್ತಿ ಪೊಲೀಸರ ವಶಕ್ಕೆ
ಚಿಕ್ಕಮಗಳೂರು, ಮಾರ್ಚ್ 23: ಹೋಂ ಕ್ವಾರೆಂಟೈನ್ ನಲ್ಲಿರುವಂತೆ ಸೂಚಿಸಿದ್ದ ವ್ಯಕ್ತಿಯೊಬ್ಬ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದುದಕ್ಕೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಚ್ 11ರಂದು ಈತ ದುಬೈ ನಿಂದ ಚಿಕ್ಕಮಗಳೂರಿಗೆ ಆಗಮಿಸಿದ್ದ. ಹೀಗಾಗಿ ಹದಿನಾಲ್ಕು ದಿನಗಳ ಕಾಲ ಮನೆಯಲ್ಲೇ ನಿಗಾದಲ್ಲಿರುವಂತೆ ಈತನಿಗೆ ಸೂಚಿಸಲಾಗಿತ್ತು. ಆದರೆ ಆ ನಿಯಮವನ್ನು ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದ.
ಬೆಳಗಾವಿಯಲ್ಲಿ ನಾಳೆಯಿಂದ ಬಸ್ ಸಂಚಾರ ಸ್ಥಗಿತ
ಹೀಗಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ದೂರಿನ ಹಿನ್ನೆಲೆಯಲ್ಲಿ ಬಸನವಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ 269, 270 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ನೆಹರು ನಗರದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.