ಕರ್ನಾಟಕ ಬಂದ್‌ಗೆ ಕರೆ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯಾರೆಲ್ಲ ಬೆಂಬಲ ಸೂಚಿಸಿದ್ದಾರೆ?, ಇಲ್ಲಿದೆ ವಿವರ
ಚಿಕ್ಕಮಗಳೂರು, ಸೆಪ್ಟೆಂಬರ್, 28: ತಮಿಳುನಾಡಿಗೆ ನೀರು ಬಿಟ್ಟಿರುವ ಹಿನ್ನೆಲೆ ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಈ ಸಂಬಂಧ ಇಂದು ಹಲವು ಜಿಲ್ಲೆಗಳಲ್ಲಿ ಹಲವು ಸಂಘಟನೆಗಳು ಸಭೆ ನಡೆಸಿವೆ. ಅದೇ ರೀತಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಬಂದ್ ಕುರಿತು ವಿವಿಧ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದು, ಈ ವೇಳೆ ಕರ್ನಾಟಕ ಬಂದ್‌ಗೆ ಯಾರೆಲ್ಲ ಬೆಂಬಲ ಸೂಚಿಸಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿ.

ಕನ್ನಡ ಪರ ಸಂಘನೆಗಳ ಒಕ್ಕೂಟ, ದಲಿತ ಸಂಘಟನೆ, ರೈತ ಸಂಘ, ಹಸಿರು ಸೇನೆ, ರಾಜಕೀಯ ಪಕ್ಷಗಳು ಸೇರಿದಂತೆ ಹೋಟೆಲ್, ಆಟೋ, ಟ್ಯಾಕ್ಸಿ ಮಾಲೀಕರು ಕೂಡ ಬಂದ್‌ಗೆ ಬೆಂಬಲ ನೀಡಿದ್ದಾರೆ. ಅಲ್ಲದೆ ನಾಳೆಯ ಕರ್ನಾಟಕ ಬಂದ್‌ಗೆ ಜೆಡಿಎಸ್, ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳ ನಾಯಕರು ಕೂಡ ಬೆಂಬಲ ನೀಡಿದ್ದಾರೆ. ಇನ್ನು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಮಾಡಲು ಸಂಘಟನೆಗಳು ನಿರ್ಧಾರ ಮಾಡಿದ್ದು, ಬಂದ್ ವೇಳೆ ಜಿಲ್ಲೆ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಮನಗರದಲ್ಲಿ ಸಭೆ
ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆ ರಾಮನಗರದಲ್ಲಿ ಇಂದು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಸಭೆ ನಡೆಸಿದ್ದು, ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಸಿವೆ. ಹಾಗಾದರೆ ಸಭೆಯಲ್ಲಿ ಏನೆಲ್ಲ ನಿರ್ಧಾರ ಕೈಗೊಂಡಿದ್ದಾರೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಮನಗರದಲ್ಲಿ ನಡೆದ ಸಭೆಯಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದ್ದು, ಈ ವೇಳೆ ರಾಮನಗರದ 50ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ ಸೂಚಿಸಿವೆ ಎಂದು ತಿಳಿದುಬಂದಿದೆ.
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ, ಕರುನಾಡ ಸೇನೆ, ಕನ್ನಡ ಜನಪರ ವೇದಿಕೆ, ಭಾರತ್ ವಿಕಾಸ್ ಪರಿಷತ್, ರಾಜ್ಯ ರೈತ ಸಂಘ- ಹಸಿರುಸೇನೆ ವತಿಯಿಂದ ಟಮಟೆ ಚಳುವಳಿ ಮಾಡಲು ನಿರ್ಧಾರ ಮಾಡಲಾಗಿದೆ. ನಗರದ ಕೆಂಪೇಗೌಡ ಸರ್ಕಲ್‌ನಿಂದ ಕೆಂಗಲ್ ಹನುಮಂತಯ್ಯ ಪ್ರತಿಮೆವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಲಿದ್ದು, ಈ ವೇಳೆ ತಮಿಳುನಾಡು ಸಿಎಂ ಸ್ಟಾಲಿನ್ ಅಣಕು ಶವಯಾತ್ರೆ ಮಾಡಲು ನಿರ್ಧಾರ ಮಾಡಿದ್ದಾರೆ.
ಇನ್ನು ನಾಳೆ (ಸೆಪ್ಟೆಂಬರ್ 29) ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಚನ್ನಪಟ್ಟಣ ಟೌನ್ ಸಂಪೂರ್ಣ ಸ್ತಬ್ಧವಾಗಲಿದೆ. ಈ ವೇಳೆ ಆಸ್ಪತ್ರೆ, ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದೆಲ್ಲ ಸೇವೆ ಸ್ಥಗಿತವಾಗಲಿದೆ ಎಂದು ತಿಳಿದುಬಂದಿದೆ.












Click it and Unblock the Notifications