ಕಾಫಿನಾಡಲ್ಲಿ ಹೊಸ ಲೋಕ ಸೃಷ್ಟಿ: ಹೆಜ್ಜೆ ಹೆಜ್ಜೆಗೂ ಜಲಪಾತಗಳು!

ಚಿಕ್ಕಮಗಳೂರು, ಜುಲೈ 25: ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ನಿರಂತರ ಮಳೆಯಿಂದ ಜಿಲ್ಲೆಯಲ್ಲಿ ಹೆಜ್ಜೆ ಹೆಜ್ಜೆಗೂ ಜಲಪಾತಗಳು ಸೃಷ್ಟಿಯಾಗಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕಾಫಿನಾಡು ಇದೀಗ ಈಗ ಜಲಪಾತಗಳ ನಾಡಾಗಿದೆ.

ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಹೀಗಾಗಿ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಜನ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಭಾರೀ ಮಳೆಯಿಂದ ಕಾಫಿ ತೋಟದಲ್ಲಿ ಮಳೆಗಾಲದ ಜಲಪಾತಗಳ ಉಗಮವಾಗಿವೆ. ಒಂದೊಂದು ಜಲಪಾತಗಳು ಒಂದೊಂದು ರೀತಿ ಭಿನ್ನ-ವಿಭಿನ್ನವಾಗಿ ಕಾಣುತ್ತಿವೆ.

many-waterfalls-have-been-created

ಭಾರೀ ಮಳೆಯಿಂದ ಕಾಫಿನಾಡಲ್ಲಿ ಹೊಸದೊಂದು ಲೋಕ ಸೃಷ್ಟಿಯಾಗಿದೆ. ಹೆಜ್ಜೆ ಹೆಜ್ಜೆಗೂ ಜಲಪಾತಗಳು ಸೃಷ್ಟಿಯಾಗಿದೆ ಎಲ್ಲಡೆ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಚಿಕ್ಕಮಗಳೂರು ಸ್ವರ್ಗದಂತೆ ಕಾಣುತ್ತಿದೆ. ಮಲೆನಾಡಿನಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಲೆನಾಡ ಭಾಗದ ನದಿ, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ, ಮಳೆಯಿಂದ ಮಲೆನಾಡು ತನ್ನ ಸೌಂದರ್ಯ ಹೆಚ್ಚಿಸಿಕೊಂಡಿದೆ. ಸ್ವರ್ಗವೇ ಬಂದು ಚಿಕ್ಕಮಗಳೂರಿನಲ್ಲಿ ನೆಲೆಸಿದಂತಿದೆ. ಪ್ರವಾಸಿಗರು ಚಿಕ್ಕಮಗಳೂರಿಗೆ ಬರುತ್ತಿದ್ದಾರೆ.

ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆ

2023 ನೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ತಲುಪಿದ್ದು, ತುಂಗಾನದಿ, ಭದ್ರಾನದಿ, ಹೇಮಾವತಿ ನದಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನದಿಗಳು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಲಾಗಿದೆ.

many-waterfalls-have-been-created

ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬ, ಕಟ್ಟಡಗಳು, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪುವುದು. ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ನಿಂತಿರುವ ತಗ್ಗು ಪ್ರದೇಶ, ಕೆರೆ, ನದಿಗಳ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಹಿರಿಯ ನಾಗರೀಕರು ಕೆರೆ, ನದಿಗಳ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಹೊರಗೆ ತೆರಳುವುದು ಅನಿವಾರ್ಯವಿದ್ದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳತಕ್ಕದ್ದು ಎಂದು ಜಿಲ್ಲಾಡಳಿತ ತಿಳಿಸಿದೆ.

ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಟ್ರಕ್ಕಿಂಗ್ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡುವುದು. ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಸದ್ಯಕ್ಕೆ ಸ್ಥಗಿತಗೊಳಿಸುವುದು. ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವುದು. ಮೇಲ್ಕಂಡ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+