ದಾಂಪತ್ಯ ಕಲಹ: ಪ್ರತಿಕ್ರಿಯೆ ನೀಡಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ
ಚಿಕ್ಕಮಗಳೂರು, ಜನವರಿ 20: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರ ಅತ್ತೆ ಪ್ರೇಮಕುಮಾರಿ ಮೈಸೂರಿನಲ್ಲಿ ಶನಿವಾರ (ಜ.19ರಂದು) ಸುದ್ದಿಗೋಷ್ಠಿ ನಡೆಸಿ ಶಾಸಕ ಕುಮಾರಸ್ವಾಮಿ ತನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ. ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದರೂ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುತ್ತಿಲ್ಲ ಎಂದು ಆರೋಪಿಸಿದ್ದರು.
ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹಾಗೂ ಸ್ಪೀಕರ್ ಗೆ ದೂರು ನೀಡುವುದಾಗಿ ತಿಳಿಸಿದ ಪ್ರೇಮಕುಮಾರಿ, ತನ್ನ ಹೆಂಡತಿಯನ್ನೇ ಸರಿಯಾಗಿ ನೋಡಿಕೊಳ್ಳದ ಶಾಸಕ ಹೇಗೆ ಆಡಳಿತ ಮಾಡುತ್ತಾರೆ. ಹೆಣ್ಣಿಗೆ ಗೌರವ ತೋರದ ಬಿಜೆಪಿ ನಾಯಕರು ರಾಜ್ಯಭಾರ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದರು.
ಈ ವಿಚಾರವಾಗಿ ಇಂದು ಪ್ರತಿಕ್ರಯಿಸಿರುವ ಶಾಸಕ ಎಂ.ಪಿ ಕುಮಾರಸ್ವಾಮಿ ನಾನು ಆ ವಿಚಾರವನ್ನು ಕೋರ್ಟ್ ನಲ್ಲೇ ತೀರ್ಮಾನಿಸಿಕೊಳ್ಳುತ್ತೇನೆ. ಈ ವಿಚಾರವನ್ನು ತೆಗೆದುಕೊಂಡು ಸ್ಪೀಕರ್ ರಮೇಶ್ ಕುಮಾರ್ ಬಳಿ ಹೋಗಲು ತೀರ್ಮಾನಿಸಿದ್ದಾರೆ.

ಆದರೆ ಸ್ಪೀಕರ್ ಹಿರಿಯರು. ಪರಿಸ್ಥಿತಿ ಅರ್ಥ ಮಾಡಿಕೊಳ್ಳುತ್ತಾರೆ. ನಾನೂ ಎಂ.ಎಲ್.ಎ ಆದ ಮೇಲೆ ಮಗನಿದ್ದಂತೆ ಎನ್ನುತ್ತಿದ್ದರು. ಅದೇ ಸೋತಾಗ ನಾನು ಅತ್ತೆ ಪ್ರೇಮಕುಮಾರಿ ಅವರಿಗೆ ಮಗನಲ್ಲವಾ? ನೆನಪಾಗಿಲ್ವ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ನಾನು ಹೆಚ್ಚೇನೂ ಮಾತನಾಡಲಾರೆ ಎಂದು ತಿಳಿಸಿದ್ದಾರೆ.
2009ರಲ್ಲಿ ಶಾಸಕ ಎಂಪಿ ಕುಮಾರಸ್ವಾಮಿ ಹಾಗೂ ಸವಿತಾ ಅವರು ವಿವಾಹವಾಗಿದ್ದರು. 2015ರಲ್ಲಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಅಂದಿನಿಂದ ಹೆಂಡತಿ ತಾಯಿ ಮನೆಯಲ್ಲೇ ವಾಸವಾಗಿದ್ದರು. ಈ ವಿಚಾರವಾಗಿ ಸವಿತಾ ಅವರು ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಮೂರು ತಿಂಗಳ ಹಿಂದೆ, ಹೆಂಡತಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ಕೋರ್ಟ್ ಆದೇಶ ನೀಡಿತ್ತು. ಕೋರ್ಟ್ ಆದೇಶ ನೀಡಿ 3 ತಿಂಗಳಾದರೂ ಕುಮಾರಸ್ವಾಮಿ ಅವರು ಹೆಂಡತಿಯನ್ನ ಮನೆಗೆ ಕೆರದುಕೊಂಡು ಹೋಗಿಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications