Breaking; ಚಿಕ್ಕಮಗಳೂರಲ್ಲಿ ಬಿಜೆಪಿಗೆ 6 ಮತಗಳಿಂದ ಗೆಲುವು!
ಚಿಕ್ಕಮಗಳೂರು, ಡಿಸೆಂಬರ್ 14; ವಿಧಾನ ಪರಿಷತ್ ಚುನಾವಣೆಯಲ್ಲಿ ಕೇವಲ 6 ಮತಗಳಿಂದ ಬಿಜೆಪಿ ಅಭ್ಯರ್ಥಿ ಎಂ. ಕೆ. ಪ್ರಾಣೇಶ್ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆಯುವ ಮೂಲಕ 6 ಮತಗಳ ಅಂತರದಿಂದ ಸೋಲು ಅನುಭವಿಸಿದರು.
ಮಂಗಳವಾರ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ನಡೆಯಿತು. ಬಿಜೆಪಿ ಅಭ್ಯರ್ಥಿ ಎಂ. ಕೆ. ಪ್ರಾಣೇಶ್ 1,188 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದರು.
ಎಎಪಿ ಅಭ್ಯರ್ಥಿ ಡಾ. ಸುಂದರಗೌಡ 1 ಮತವನ್ನು ಪಡೆದರು. ಉಳಿದಂತೆ 39 ಮತಗಳು ತಿರಸ್ಕೃತಗೊಂಡವು. ಮೊದಲು ಗಾಯತ್ರಿ ಶಾಂತೇಗೌಡ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಅಂತಿಮ ಫಲಿತಾಂಶ ಪ್ರಕಟವಾದಾಗ ಬಿಜೆಪಿಗೆ ಅಭ್ಯರ್ಥಿಗೆ 6 ಮತದ ಗೆಲುವು ಸಿಕ್ಕಿತು.

ಕಾಂಗ್ರೆಸ್ ಪ್ರತಿಭಟನೆ; ಕೇವಲ 6 ಮತಗಳ ಅಂತರದಿಂದ ಕಾಂಗ್ರೆಸ್ ಸೋಲನುಭವಿಸಿದ ಹಿನ್ನೆಲೆಯಲ್ಲಿ ಮರು ಮತ ಏಣಿಕೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಮತ ಏಣಿಕೆ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಮರು ಮತ ಎಣಿಕೆಗೆ ಆಗ್ರಹಿಸಿರುವ ಕಾಂಗ್ರೆಸ್ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಕಾರು ತಡೆಯಲು ಯತ್ನಿಸಿದರು. ಪ್ರತಿಭಟನೆ ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.












Click it and Unblock the Notifications